ದೇವೇಗೌಡರ ಕುಟುಂಬದ ಆಸ್ತಿ ಪೆನ್​​ಡ್ರೈವ್: ಡಿಕೆಸು

ದೇವೇಗೌಡರ ಕುಟುಂಬದ ಆಸ್ತಿ ಪೆನ್​​ಡ್ರೈವ್: ಡಿಕೆಸು

ಬೆಂಗಳೂರು:  ರಾಜ ರಾಜಕೀಯದಲ್ಲಿ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈ ಪ್ರಕರಣ ಬಾರಿ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ನಾಯಕರುಗಳ ವಾಕ್ ಸಮರ ಜೋರಾಗಿಯೇ ನಡೆಯುತ್ತಿದೆ.

ಹೌದು, ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಬ್ರದರ್ಸ್ ಕುಟುಂಬ, ‘420 ಕುಟುಂಬ’ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದರು. ಈಗ ಈ ಮಾತಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರು ಎಚ್‌ಡಿ ಕುಮಾರಸ್ವಾಮಿಗೆ ತಿರುಗಿಟು ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೇವೇಗೌಡರ  ಕುಟುಂಬವನ್ನು 420 ಎಂದು ಕರೆಯುವುದಿಲ್ಲ. ಏಕೆಂದರೆ ಅದು ಮಾಜಿ ಪ್ರಧಾನಿಗಳ ಕುಟುಂಬ. ಅವರ ಕುಟುಂಬ, ಅಭಿಮಾನಿಗಳಿಗೆ ಬೇಸರ ಆಗಬಹುದು. ದೇವೇಗೌಡರ ಕುಟುಂಬದ ಆಸ್ತಿ ಪೆನ್​ಡ್ರೈವ್​ ಎಂದು ವ್ಯಂಗ್ಯವಾಡಿದರು.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬದ ಆಸ್ತಿ ಪೆನ್​​ಡ್ರೈವ್ ಆಗಿದೆ. ಇನ್ನು ತೆನೆ ಹೊತ್ತ ಮಹಿಳೆ ಪೆನ್​ಡ್ರೈವ್ ಹೊರಬೇಕಾಗುತ್ತದೆ. ಇದು ಪೆನ್​​ಡ್ರೈವ್ ಕುಟುಂಬ ಎಂದು ಡಿಕೆ ಸುರೇಶ್​ ಲೇವಡಿ ಮಾಡಿದರು.

ಎಲ್ಲವನ್ನೂ ದೇಶ ಹಾಗೂ ರಾಜ್ಯದ ಜನ ಗಮನಿಸುತ್ತಿದ್ದಾರೆ. ಬೇಕಿದ್ದರೆ ಅವರಿಗೆ ಮನಸ್ಸಿಗೆ ಬಂದಹಾಗೆ ಬೈದುಕೊಳ್ಳಲಿ. ಹಾಸನದ ಹೆಣ್ಮಕ್ಕಳ ಮರ್ಯಾದೆ ಉಳಿಸಬೇಕು ಅಷ್ಟೇ. ನಾವು ಅವರನ್ನ ಕೆಣಕಿಲ್ಲ ಎಂದು ಸುರೇಶ್ ಹೇಳಿದರು.

 

Related