ಮುರಿದು ಬೀಳುತ್ತಿದ ಶಾಲೆಗೆ ಅಭಿವೃದ್ದಿ ಭಾಗ್ಯ

ಮುರಿದು ಬೀಳುತ್ತಿದ ಶಾಲೆಗೆ ಅಭಿವೃದ್ದಿ ಭಾಗ್ಯ

ಮಂಡ್ಯ : ಬಿಎಸ್.ಯಡಿಯೂರಪ್ಪ ಓದಿದ ಹೈಸ್ಕೂಲ್‌ಗೆ ಅಭಿವೃದ್ದಿ ಯೋಗ ಕೂಡಿಬಂದಿದೆ. ಮುನ್ಸಿಪಲ್ ಶಾಲೆಯನ್ನು ಜಿಲ್ಲೆಯ ಮಾದರಿ ಶಾಲೆಯನ್ನಾಗಿ ರೂಪಿಸಲು ಜಿಲ್ಲಾಡಳಿತ ಸುಮಾರು 4 ಕೋಟಿ ವೆಚ್ಚದಲ್ಲಿ ನವೀಕರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ.

ಈ ಶಾಲೆಯನ್ನು ಶಾಲಾ ಕಟ್ಟಡ ಕೆಳ ಅಂತಸ್ತು ದುರಸ್ತಿ, ಮೇಲಂತಸ್ತು ನಿರ್ಮಾಣ, ವಿಜ್ಞಾನ ಪ್ರಯೋಗಾಲಯ ಹಾಗೂ ಗ್ರಂಥಾಲಯ ನಿರ್ಮಿಸಲು 3 ಕೋಟಿ ಹಣ ವೆಚ್ಚ ಮಾಡಲು ನಿರ್ಧರಿಸಿದೆ.

ದುರಾದೃಷ್ಠಕರ ಸಂಗತಿಯೆಂದರೆ ಜಿಲ್ಲಾಡಳಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಓದಿದ ಶಾಲೆ ಎಂಬ ನೆಪದಲ್ಲಿ ಹೈಸ್ಕೂಲ್ ಅಭಿವೃದ್ದಿಗೆ ಗಮನ ಹರಿಸಿದೆ. ಆದರೆ ಮುಖ್ಯಮಂತ್ರಿಗಳು 7, 8ನೇ ತರಗತಿ ಓದಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿದು ಬೀಳುತ್ತಿದ್ದರೂ ಅಧಿಕಾರಿಗಳು ಅತ್ತ ಕಡೆ ತಿರುಗಿ ನೋಡದಿರುವುದು ಚರ್ಚೆಗೆ ಗ್ರಾಸವಾಗಿದೆ.

ಯಡಿಯೂರಪ್ಪ ಅವರು ಕಿರಿಯ ಪ್ರಾಥಮಿಕ ಶಿಕ್ಷಣವನ್ನು ಬೂಕನಕೆರೆಯಲ್ಲಿ ಪೂರೈಸಿದ ಬಳಿಕ ಪ್ರಾಥಮಿಕ ಶಿಕ್ಷಣ ಪಡೆಯಲು ಮಂಡ್ಯಕ್ಕೆ ಬಂದರು. ಆನೆಕೆರೆ ಬೀದಿಯ ತಾತನ ಮನೆಯಲ್ಲಿದ್ದುಕೊಂಡೇ ಪೇಟೆ ಬೀದಿಯಲ್ಲಿರುವ ಶತಮಾನದಷ್ಟು ಹಳೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪೂರೈಸಿ ನಂತರ ಮುನ್ಸಿಪಲ್ ಪ್ರೌಢಶಾಲೆಯಲ್ಲಿ 10ನೇ ತರಗತಿಯವರೆಗೆ ಓದಿದರು.

ಗ್ರಂಥಾಲಯದಲ್ಲಿ ಪುಸ್ತಕ ಹಾಗೂ ಪೀಠೋಪಕರಣಗಳ ಖರೀದಿಗೆ 20 ಲಕ್ಷ ವೆಚ್ಚ ಮಾಡಲಾಗುತ್ತಿದೆ. 30 ಲಕ್ಷ ಹಣದಲ್ಲಿ ವಿಜ್ಞಾನ ಪ್ರಯೋಗಾಲಯಕ್ಕೆ ಸಲಕರಣೆಗಳನ್ನು ಖರೀದಿ ಮಾಡಲಾಗುತ್ತಿದೆ. ಸಭಾಂಗಣಕ್ಕೆ 35 ಲಕ್ಷ, ಶಾಲಾ ಕೊಠಡಿ, ಸಭಾಂಗಣದ ಪೀಠೋಪಕರಣಕ್ಕೆ 15 ಲಕ್ಷ ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆAಕಟೇಶ್ ತಿಳಿಸಿದ್ದಾರೆ.

Related