ಬೃಹತ್ ಬೆಂಗಳೂರು ಮಹಾನಗರ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆಸಂಬಂಧಿಸಿದಂತೆ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಸಂಬAಧಪಟ್ಟ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದರು.
ಹೆಚ್.ಎಸ್.ಆರ್ ಲೇಔಟ್ ವಾರ್ಡ್ ಬಿಡಿಎ ಕಾಂಪ್ಲೆಕ್ಸ್ ಬ್ಲಾಕ್ ಬಳಿ ಪೌರಕಾರ್ಮಿಕರ ಮಸ್ಟರಿಂಗ್ ಪಾಯಿಂಟ್ ಗೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯ ಆಯುಕ್ತರು, ೬೪ ಪೌರಕಾರ್ಮಿಕರಲ್ಲಿ ೫೪ ಮಂದಿ ಮಾತ್ರ ಹಾಜರಿದ್ದರು. ಈ ಪೈಕಿ ನಿರಂತರವಾಗಿ ಬಾರದೇ ಇರುವವರನ್ನು ಬೇರೆಡೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಪಾರಕಾರ್ಮಿಕರು ಕಡ್ಡಾಯವಾಗಿ ಸುರಕ್ಷಾ ಸಾಮಗ್ರಿಗಳನ್ನು ಉಪಯೋಗಿಸಬೇಕು. ಸುರಕ್ಷಾ ಸಾಮಗ್ರಿಗಳನ್ನು ಧರಿಸದಿದ್ದರೆ ಮೇಲ್ವಿಚಾಕರಿಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಸ್ಥಳೀಯ ನಾಗರಿಕರು ಮುಖ್ಯ ಆಯುಕ್ತರನ್ನು ಭೇಟಿಯಾಗಿ ಹೆಚ್.ಎಸ್.ಆರ್. ಲೇಔಟ್ ನಲ್ಲಿ ಪ್ರತಿ ಮಳೆಗಾಲದಲ್ಲೂ ಸಮಸ್ಯೆಯಾಗಲಿದ್ದು, ಅದಕ್ಕೆ ಶಾಶ್ವತ ಪರಿಹಾರ ನೀಡಲು ಮನವಿ ಮಾಡಿದರು.