ಡಿಕೆ ಶಿವಕುಮಾರ್ ಗೆ ಸಂಕಷ್ಟ

ಡಿಕೆ ಶಿವಕುಮಾರ್ ಗೆ ಸಂಕಷ್ಟ

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಅಕ್ರಮ ಆಸ್ತಿ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆಗೆ ಆರಂಭಿಸಿದೆ.

ಹೌದು, ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಿದ ಸಮ್ಮತಿಯನ್ನು ಹಿಂಪಡೆದಿರುವ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಆರಂಭಿಸಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಬಿಐ ತನಿಖೆಗೆ ಸಮ್ಮತಿ ಸೂಚಿಸಲಾಗಿತ್ತು. ಇದನ್ನು ಕೆಲ ತಿಂಗಳ ಹಿಂದಷ್ಟೇ ಕಾಂಗ್ರೆಸ್‌ ಸರ್ಕಾರವು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ಹಾಗೂ ಯತ್ನಾಳ್‌ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್‌, ನ್ಯಾ.ಉಮೇಶ್‌ ಎಂ. ಅಡಿಗ ಅವರ ನ್ಯಾಯಪೀಠವು ವಿಚಾರಣೆ ಆರಂಭಿಸಿದೆ.

 

Related