ಭೂ ದಾಖಲೆಗಳ ಡಿಜಿಟಲೀಕರಣ

ಭೂ ದಾಖಲೆಗಳ ಡಿಜಿಟಲೀಕರಣ

ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿಯಲ್ಲಿ ನೂತನವಾಗಿ ಅನುಷ್ಠಾನ ಗೊಳಿಸಿರುವ ಕಂದಾಯ ಇಲಾಖೆಯ ಎಲ್ಲಾ ಕಡತಗಳ ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣದ ಮೂಲಕ ಪಡೆಯುವ ಕೆಲಸಕ್ಕೆ ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್ ಇಂದು (ಸೋಮವಾರ ಜ. 13) ರಂದು ಚಾಲನೆ ನೀಡಿದರು.

ನಂತರ ಮಾತನಾಡಿ ಅವರು, ಕಂದಾಯ ಸಚಿವರ ದೂರದೃಷ್ಟಿ ಆಲೋಚನೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿ ವರ್ಗದವರ ಸಹಕಾರದಿಂದ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಲೀಕರಣ ಮಾಡಿದ್ದು, ಇದರಿಂದಾಗಿ ಹಳೆಯ ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತನೆಯಾಗಿವೆ. ರೆಕಾರ್ಡ್ ರೂಂ ಗಳಿಂದ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆಯಾಗಿದೆ. ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳುವಾಗಲು, ತಿದಿಲು ಅಸಾಧ್ಯ ಎಂದರು. ಇದನ್ನೂ ಓದಿ: ಗಾಂಧೀ ಭಾರತ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಮುನಿಯಪ್ಪ ಭಾಗಿ

ನೇರವಾಗಿ ನೀವೇ ಡಿಜಿಟಲ್ ಮಾಧ್ಯಮದಿಂದ ಭೂ ದಾಖಲೆಗಳನ್ನು ಪಡೆದುಕೊಳ್ಳುವ ಸೌಲಭ್ಯವಿದೆ. ನಿಮ್ಮ ದಾಖಲೆಗಳನ್ನು ನಿಮ್ಮ ಕೈಗೆ ತಲುಪಿಸುವ ಯೋಜನೆ ಇದಾಗಿದೆ. ವಿಳಂಬ, ಅಡೆ ತಡೆಗಳನ್ನು ಆಲಿಸಿ, ತ್ವರಿತ ಆಡಳಿತ ಸೇವೆಯನ್ನು ಒದಗಿಸುವ ಪ್ರಯತ್ನ ಡಿಜಿ ಸ್ಪರ್ಶದಿಂದ ಕಾಂಗ್ರೆಸ್ ಸರ್ಕಾರದ ಉತ್ತಮ ಜನಪರ ಆಡಳಿತ ವಾಗಿದೆ ಎಂದರು.

ಈ ಸಂದರ್ಭದಲ್ಲಿ ತಹಶಿಲ್ದಾರ್ ರಮೇಶ್ ಬಾಬು, ಜಿ.ಪಂ. ಮಾಜಿ ಅಧ್ಯಕ್ಷ ಕೆ.ಎಸ್.ಮಹೇಶ್, ಕಾಡ ಮಾಜಿ ಅಧ್ಯಕ್ಷ ಹಂಗಳ ಎಚ್.ಎಸ್.ನಂಜಪ್ಪ, ಮಂಚಳ್ಳಿ ಲೋಕೇಶ್ ಸೇರಿದಂತೆ ಪುರಸಭಾ ಸದಸ್ಯರು, ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

Related