ಶಿಕ್ಷಕರು ಗೈರಾದರೆ ಶಿಸ್ತಿನ ಕ್ರಮ

ಶಿಕ್ಷಕರು ಗೈರಾದರೆ ಶಿಸ್ತಿನ ಕ್ರಮ

ಕಮಲನಗರ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅನುದಾನಿತ ಪ್ರೌಢಶಾಲೆ ಆರಂಭಗೊAಡು ನಾಲ್ಕು ದಿನ ಕಳೆದಿವೆ. ಆದರೆ ಕೆಲ ಶಾಲೆಗಳಲ್ಲಿ ಶಿಕ್ಷಕರು ಶಾಲೆಗೆ ಬಾರದೆ ಗೈರಾಗಿದ್ದಾರೆ. ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಔರಾದ್ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್. ನಗನೂರ ಶಿಕ್ಷಕರಿಗೆ ಎಚ್ಚರಿಕೆ ನೀಡಿದರು.
ಶುಕ್ರವಾರ ಮತ್ತು ಶನಿವಾರ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಮಾತನಾಡಿ, ಕೋವಿಡ್-19 ಹಿನ್ನಲೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಸಂಖ್ಯೆ ದಿನ ನಿತ್ಯ ಕಡಿಮೆ ಆಗುತ್ತಿದೆ. ಅಲ್ಲದೇ ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಬಾರದೆ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು ಇದಕ್ಕೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿದರು.
ಶಾಲೆಯಲ್ಲಿ ಮಕ್ಕಳು ಸಂಖ್ಯೆ ಇದ್ದರೂ, ಶಿಕ್ಷಕರು ಶಾಲೆಗೆ ಬರುವುದಿಲ್ಲ. ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಶೌಚಾಲಯ ಕೊರತೆಯಿಂದ ಶಾಲೆಯ ಅಕ್ಕಪಕ್ಕದಲ್ಲಿ ಹೋಗುವ ಪರಿಸ್ಥಿತಿ ಉಂಟಾಗಿದೆ. ಕೆಲ ಶಾಲೆಗಳಲ್ಲಿ ನೀರಿನ ಕೊರತೆಯಿಂದ ದುರ್ವಾಸನೆ ಹರಡುತ್ತಿದೆ. ಕಾಟಾಚಾರಕ್ಕೆ ಎನ್ನುವಂತೆ ಶೌಚಾಲಯ ನಿರ್ಮಿಸಲಾಗಿದ್ದು, ನಿರ್ವಹಣೆ ಕೊರತೆ ಎದ್ದು ಕಾಣುತ್ತಿದೆ. ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ತರಕಾರಿ ಬಳಸದೇ ಕಳಪೆಮಟ್ಟದ ಊಟ ವಿತರಿಸುವುದು ಕಂಡು ಬರುತ್ತಿದೆ. ಉತ್ತಮ ಅಡುಗೆ ತಯಾರಿಸಿ ಮಕ್ಕಳಿಗೆ ವಿತರಿಸಬೇಕು ಎಂದು ಶಿಕ್ಷಕರಿಗೆ ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ಬಲಭೀಮ ಕುಲಕರ್ಣಿ, ಇಸಿಒ ಈಶ್ವರ ಕ್ಯಾದೆ, ಬಿ ಅರ್ಪಿ ನಾರಾಯಣ ರಾಠೋಡ, ಸಿ ಆರ್ ಪಿ ಶಿವಕುಮಾರ ಇದ್ದರು.

Related