ಗಣಿ ದಣಿಗೆ ಸಂಕಷ್ಟ!

ಗಣಿ ದಣಿಗೆ ಸಂಕಷ್ಟ!

ಕೊಪ್ಪಳ: 2023 ನೇ ಸಾಲಿನ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ರಾಜ್ಯ ರಾಜಕಾರಣದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಶಾಸಕ ಜನಾರ್ದನ ರೆಡ್ಡಿಗೆ ಇದೀಗ ಸಂಕಷ್ಟ ಎದುರಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಮತ್ತೆ ವಿಧಾನಸಭಾ ಪ್ರವೇಶ ಮಾಡಿರುವ ಶಾಸಕ ಜನಾರ್ದನ ರೆಡ್ಡಿಗೆ ಹೊಸ ಸಂಕಷ್ಟವೊಂದು ಎದುರಾಗಿದೆ.

ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನಾರ್ದನ ರಡ್ಡಿ ನಾಮಪತ್ರದಲ್ಲಿನ ದೋಷದ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗೆ ರಾಜ್ಯ ಚುನಾವಣಾಧಿಕಾರಿ ಪತ್ರ ಬರೆದಿದ್ದಾರೆ. ಅನಂತಪುರದ ಗಣಿ ಉದ್ಯಮಿ ಟಪಾಲು ಶ್ಯಾಮ್​ ಪ್ರಸಾದ್ ಎನ್ನುವರು ಜನಾದರ್ನ ರೆಡ್ಡಿ ನಾಮಪತ್ರ ಸಲ್ಲಿಸುವಾಗ ಸರಿಯಾದ ಮಾಹಿತಿ ನೀಡಿಲ್ಲ. ವಾಹನಗಳು, ಆಸ್ತಿ ವಿವರ ಸರಿಯಾಗಿ ನೀಡಿಲ್ಲ ಎಂದು ಆರೋಪಿಸಿ ಚುನಾವಣಾ ಆಯೋಕ್ಕೆ ದೂರು ನೀಡಿದ್ದರು. ಈ ದೂರನ್ನು ಚುನಾವಣಾ ಆಯೋಗ ಸಹ ಗಂಭೀರವಾಗಿ ಪರಿಗಣಿಸಿದ್ದು, ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.

 

Related