ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ..

  • In State
  • July 21, 2022
  • 231 Views
ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ..

ಬೆಂಗಳೂರು, ಜುಲೈ 21 : ಕರ್ನಾಟಕದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿಗಳನ್ನು ನೀಡುವುದಕ್ಕೆ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯ ಶೈಕ್ಷಣಿಕ ಸಾಲಿನಲ್ಲಿ 45 ದಿನ ಮಧ್ಯಾಹ್ನದ ಊಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ಅನ್ನು ನೀಡಲಾಗುತ್ತದೆ. ಪ್ರಸ್ತುತ ಕರ್ನಾಟಕದ ಏಳು ಹಿಂದುಳಿದ ಜಿಲ್ಲೆಗಳಲ್ಲಿ ಮಾತ್ರ ಈ ಯೋಜನೆಯು ಚಾಲ್ತಿಯಲ್ಲಿದೆ.

ಅದನ್ನು ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೊಳಿಸುವುದಾಗಿ ಸರ್ಕಾರದ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಷ್ಟೇ ಅಲ್ಲದೇ ಪ್ರೌಢಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಈ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ.

Related