ವಿಶೇಷ ಚೇತನರ ದ್ವೀಚಕ್ರ, ತ್ರಿಚಕ್ರ ವಾಹನಗಳ ವಿತರಣೆ

ವಿಶೇಷ ಚೇತನರ ದ್ವೀಚಕ್ರ, ತ್ರಿಚಕ್ರ ವಾಹನಗಳ ವಿತರಣೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜದಾದ್ಯಂತ ವಿವಿಧ ರೀತಿಯಲ್ಲಿ ಮತ ಪ್ರಚಾರ ಮಾಡಲಾಗುತ್ತಿತ್ತು ಇಂದು ವಿಧಾನಸೌಧ ಮುಂಭಾಗದಲ್ಲಿ ವಿಶೇಷ ಚೇತನರಿಗೆ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನ ವಿತರಣೆ ಮಾಡುವ ಮೂಲಕ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಿಂದ ಕಂಠೀರವ ಕ್ರೀಡಾಂಗಣದವರೆಗೆ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೇಟ್ಸ್ ಮುಂಭಾಗದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಚಾಲನೆ ನೀಡಿದರು.

ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರ ತುಷಾರ್ ಗಿರಿ ನಾಥ್ ಅವರು ಮತದಾನದ ಪ್ರತಿಜ್ಞಾವಿಧಿ ಬೋದಿಸಿದರು.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮ ರಾವ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related