ಬೆಂಗಳೂರು ನೂತನ ಜಿಲ್ಲಾಧಿಕಾರಿಯಾಗಿ ದಯಾನಂದ.ಕೆ.ಎ ನೇಮಕ

ಬೆಂಗಳೂರು ನೂತನ ಜಿಲ್ಲಾಧಿಕಾರಿಯಾಗಿ ದಯಾನಂದ.ಕೆ.ಎ ನೇಮಕ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ನೂತನ ಜಿಲ್ಲಾಧಿಕಾರಿಗಳಾಗಿ ಕೆ.ಎ.ದಯಾನಂದ್ ಅವರು ಅಧಿಕಾರ ಸ್ವೀಕರಿಸಿದರು.

ಹಿಂದುಳಿದ ವರ್ಗಗಳ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ದಯಾನಂದ ಕೆ.ಎ ಅವರನ್ನು ಸಿಲಿಕಾನ್ ಸಿಟಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮತದಾರರ ಪರಿಷ್ಕರಣೆ ಅಕ್ರಮ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್ ಅವರನ್ನು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಅಮಾನತುಗೊಳಿಸಲಾಗಿತ್ತು.

ಬಳಿಕ ಸಂಗಪ್ಪ ಅವರಿಗೆ ಪ್ರಭಾರಿ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಇದೀಗ ದಯಾನಂದ ಕೆ.ಎ. ಅವರರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇನ್ನು ಪೊಲೀಸ್ ಇಲಾಖೆಯಲ್ಲಿಯೂ ಮೇಜರ್ ಸರ್ಜರಿ ನಡೆಸಿದ್ದು, 45 ಡಿವೈಎಸ್ಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂದರ್ಭದಲ್ಲಿ ನಿರ್ಗಮಿತ ಉಸ್ತುವಾರಿ ಜಿಲ್ಲಾಧಿಕಾರಿ ಸಂಗಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

Related