ಉ.ಪ್ರ ಹಿಂಸಾಚಾರ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ

ಉ.ಪ್ರ ಹಿಂಸಾಚಾರ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ

ಬಳ್ಳಾರಿ : ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯು ಉತ್ತರ ಪ್ರದೇಶದದಲ್ಲಿ ಅಸಂವಿಧಾನಿಕವಾಗಿ ವರ್ತಿಸಿದ ಕೇಂದ್ರ ಸಚಿವನ ಮಗ ಕಾರು ಹತ್ತಿಸಿದ ಪರಿಣಾಮ ಉತ್ತರಪ್ರದೇಶದಲ್ಲಿ ಪ್ರತಿಭಟನಾನಿರತ 8 ಜನ ರೈತರು ಸಾವನ್ನಪ್ಪಿದ್ದಾರೆ.

ಬಳಿಕ ನಡೆದ ಹಿಂಸಾಚಾರದಲ್ಲಿ ಲಖೀಂಪುರ್‌ನಲ್ಲಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ನೀಡುವ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು.

ಈ ವೇಳೆ ಬೆಂಗಾವಲು ವಾಹನಗಳ ಸಾಲಿನಲ್ಲಿ ಬರುತ್ತಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾನ ಪುತ್ರ ಇದ್ದ ರೈತರ ಮೇಲೆ ಹರಿದು ಎಂಟು ಜನ ರೈತರು ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿದೆ. ಬಳಿಕ ಅಲ್ಲಿ ಪ್ರತಿಭಟನೆ ಉದ್ರಿಕ್ತಗೊಂಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಇಳಿಯಬೇಕಿದ್ದ ಹೆಲಿಪ್ಯಾಡ್‌ಗೂ ರೈತ ಸಂಘಟನೆಗಳು ಮುತ್ತಿಗೆ ಹಾಕಿದ್ದಾರೆ.

ಕಾರಣ ಇತ್ತ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮೊದಲೇ ತಿಳಿದಿತ್ತು. ಆದರೆ ರೈತರ ಪ್ರತಿಭಟನೆಯಲ್ಲಿ ಸಮಾಜಘಾತುಕ ಶಕ್ತಿಗಳು ಸೇರಿಕೊಂಡು. ಸಚಿವರ ಮಗನ ಮೇಲೆ ಎಫ್‌ಐಆರ್ ದಾಖಲಿಸಿ ಬಂಧಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿದೆ. ಇತ್ತ ಹಿಂಸಾಚಾರವನ್ನು ಖಂಡಿಸಿರುವ ಪ್ರಿಯಾಂಕ ಗಾಂಧಿ ಮೃತಪಟ್ಟ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಹೊರಟಾಗ ಕೆಲ ಹಿರಿಯ ರಾಜಕಾರಣಿಗಳ ಕೈವಾಡದಿಂದ ಪೋಲಿಸ್ ಮೂಲಕ ಉದ್ದೇಶ ಪೂರ್ವಕವಾಗಿ ಬಂಧಿಸಲಾಗಿದೆ.

ಭಾರತ ದೇಶದ ಸಂವಿಧಾನಕ್ಕೆ ತಂದಂತೆ ಉದ್ರಿಗ್ನ ಘಟನೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರು ಕಠಿಣ ಕ್ರಮ ಮತ್ತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಬುಧವಾರ ಬಳ್ಳಾರಿ ರಾಯಲ್ ವೃತ್ತದಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಮೊಹಮದ್ ರಫೀಕ್ ರವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಕೇಂದ್ರ ಸರ್ಕಾರದ ಅನ್ಯಾಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಯವರ ಬಂಧನ ಖಂಡಿಸಿ ಉತ್ತರ ಪ್ರದೇಶದ ಆಡಳಿತ ವ್ಯವಸ್ಥೆ ಸರಿಪಡಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಳ್ಳಾರಿ ನಗರದ ಎಲ್ಲಾ ವಾರ್ಡ್ಗಳ ಮಹಾನಗರ ಪಾಲಿಕೆಯ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಪಕ್ಷದ ನಾಯಕರು ಕಾರ್ಯಕರ್ತರು ಇನ್ನಿತರರಿದ್ದರು.

Related