ಡಿವೈನ್ ಸ್ಟಾರ್ ನ ಹೊಸ ಪ್ರಯತ್ನ

ಡಿವೈನ್ ಸ್ಟಾರ್ ನ ಹೊಸ ಪ್ರಯತ್ನ

ಬೆಂಗಳೂರು: ಡಿವೈನ್ ಸ್ಟಾರ್ ಎಂದು ಪ್ರಖ್ಯಾತ ಹೊಂದಿರುವ ರಿಷಬ್ ಶೆಟ್ಟಿಯವರು ಯಾವಾಗಲೂ ಹೊಸ ಪ್ರಯತ್ನಕ್ಕೆ ಮುಂದೋಗ್ತಾ ಇರುತ್ತಾರೆ. ಅದೇ ತರ ಇನ್ನೊಂದು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಅವರು ಮಾಡಿದ ಎಲ್ಲಾ ಹೊಸ ಪ್ರಯತ್ನಕ್ಕೆ ಅಭಿಮಾನಿಗಳು ಅವರ ಬೆಂಬಲಕ್ಕೆ ಇದ್ದಾರೆ.

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ  ಅವರು ‘ಕಾಂತಾರ’ ಸಿನಿಮಾದ ಸೂಪರ್ ಸಕ್ಸಸ್ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮ್ಮ ಹೊಸ ಹೆಜ್ಜೆ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೆರಾಡಿ ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ.

ಕೆರಾಡಿ ಸ್ಟುಡಿಯೋಸ್’ ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ ಎಂದು ರಿಷಬ್ ಪತ್ರ ಬರೆದಿದ್ದಾರೆ.

ಅಂದ ಹಾಗೆ ಕೆರಾಡಿ. ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರೆಸಲಿದ್ದೇವೆ. ನಿಮ್ಮ ಸಹಕಾರವಿರಲಿ’ ಎಂದು ರಿಷಬ್ ಕೋರಿದ್ದಾರೆ.

 

Related