ಡಿಜೆ ಹಳ್ಳಿ ಪ್ರಕರಣ: ನವೀನ್‍ಗೆ ನ್ಯಾಯಾಂಗ ಬಂಧನ

ಡಿಜೆ ಹಳ್ಳಿ ಪ್ರಕರಣ: ನವೀನ್‍ಗೆ ನ್ಯಾಯಾಂಗ ಬಂಧನ

ಬೆಂಗಳೂರು: ಇಸ್ಲಾಂ ಧರ್ಮ ಪ್ರವರ್ತಕ ಮಹಮ್ಮದ್ ಪೈಗಂಬರ್ ಬಗ್ಗೆ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.

11ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ 14 ದಿನ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿ ನವೀನ್ ಹಾಕಿದ್ದ ಅವಹೇಳನಕಾರಿ ಪೋಸ್ಟ್‍ನಿಂದ ಡಿಜೆ ಹಳ್ಳಿ, ಕೆ ಜೆ ಹಳ್ಳಿಯಲ್ಲಿ ಗಲಭೆ ಉಂಟಾಗಿತ್ತು. ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಸಮುದಾಯದವರು ದಾಳಿ ನಡೆಸಿ ಧ್ವಂಸ ಮಾಡಿದ್ದರು.

Related