ರಾಹುಲ್ ಗಾಂಧಿಗೆ ಡಿಕೆಶಿ ಅಭಿನಂದನೆ

ರಾಹುಲ್ ಗಾಂಧಿಗೆ ಡಿಕೆಶಿ ಅಭಿನಂದನೆ

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿಯವರು ಆಯ್ಕೆಯಾಗಿದ್ದು, ರಾಹುಲ್ ಗಾಂಧಿಯವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕನಾಗಬೇಕು ಎಂಬುದು ರಾಹುಲ್ ಗಾಂಧಿ ಅವರ ಬಯಕೆಯಲ್ಲ. ಇದು ಜನರ ಬಯಕೆ.  ನಮ್ಮ ಮನವಿಯನ್ನು ಒಪ್ಪಿ ವಿರೋಧ ಪಕ್ಷದ ನಾಯಕ ಜವಾಬ್ದಾರಿ ವಹಿಸಿಕೊಂಡ ರಾಹುಲ್ ಗಾಂಧಿ ಅವರಿಗೆ ದೇಶದ ಜನರ ಪರವಾಗಿ, ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಹೇಳುತ್ತೇನೆ ಎಂದರು. ಇದನ್ನೂ ಓದಿ:  ನನ್ನ ಪ್ರಕಾರ ಹಾಲಿನ ದರ ಇನ್ನೂ ಹೆಚ್ಚಳ ಮಾಡಬೇಕಿತ್ತು: ಡಿಸಿಎಂ

ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗೆ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಈ ತೀರ್ಮಾನ ನಾವು ಸ್ವಾಗತಿಸುತ್ತೇವೆ. ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ತೀರ್ಮಾನ ಕೈಗೊಂಡ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಹಾಗು ರಾಹುಲ್ ಗಾಂಧಿ ಅವರಿಗೆ ಒತ್ತಡ ಹಾಕಿದ ಇಂಡಿಯಾ ಮೈತ್ರಿಕೂಟ ನಾಯಕರಿಗೆ ಅಭಿನಂದನೆಗಳು. ಈ ದೇಶದ ರಕ್ಷಣೆ ಹಾಗೂ ಜನರ ಹಿತ ಕಾಯಲು ಇಂಡಿಯಾ ಮೈತ್ರಿಕೂಟ ಹೋರಾಟ ಮಾಡಲಿದೆ” ಎಂದು ತಿಳಿಸಿದರು.

ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ. ಈ ಬಗ್ಗೆ ಉತ್ತರ ನೀಡಲು ಅವರೇ ಸೂಕ್ತ ವ್ಯಕ್ತಿ” ಎಂದು ತಿಳಿಸಿದರು.

Related