ಡಿಕೆಶಿ ತನ್ನ ಶ್ರಮಕ್ಕೆ ತಕ್ಕ ಪ್ರತಿಫಲ ಕೇಳುತ್ತಿದ್ದಾರೆ: ಡಿಕೆ ಸುರೇಶ್

ಡಿಕೆಶಿ ತನ್ನ ಶ್ರಮಕ್ಕೆ ತಕ್ಕ ಪ್ರತಿಫಲ ಕೇಳುತ್ತಿದ್ದಾರೆ: ಡಿಕೆ ಸುರೇಶ್

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆದ್ದಿದ್ದರು ಸಹ ಮೂರು ದಿನಗಳಾದರೂ ಸಿಎಂ ಪಟ್ಟಕೆ ಯಾರೆಂದು ಇನ್ನೂ ತೀರ್ಮಾನಗೊಂಡಿಲ್ಲ. ಇನ್ನು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರು ಸಿಎಂ ಪಟ್ಟಕ್ಕೆ ಪಟ್ಟು ಹಿಡಿದಿದ್ದಾರೆ.

ಡಿಕೆ ಶಿವಕುಮಾರ್ ಅವರು ಪಕ್ಷದಲ್ಲಿ ಹಲವಾರು ಕೆಲಸಗಳನ್ನು ಮಾಡಿ ಪಕ್ಷಕ್ಕೆ ಬಹುಮತ ಬರಲಿಕ್ಕೆ ಡಿಕೆಶಿ ಅವರು ಪಟ್ಟಶ್ರಮ ಅಷ್ಟಿಷ್ಟಲ್ಲಎಂದು ಡಿಕೆ ಸುರೇಶ್ ಅವರು ಇಂದು ದೆಹಲಿಯಲ್ಲಿ

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕಷ್ಟ ಸಂದರ್ಭದಲ್ಲಿ ಕಾಂಗ್ರೆಸ್ ಡಿಕೆ.ಶಿವಕುಮಾರ್’ಗೆ ಜವಾಬ್ದಾರಿ ನೀಡಿತು. ಸೋನಿಯಾ ಗಾಂಧಿಯವರು ನಮಗೆ ಪಕ್ಷದ ಜವಾಬ್ದಾರಿ ನೀಡಿದ್ದರು. ನಿಮ್ಮ ಮೇಲೆ ನಂಬಿಕೆ, ವಿಶ್ವಾಸವಿದೆ ಎಂದು ಹೇಳಿದ್ದರು. ಕೊಟ್ಟ ಜವಾಬ್ದಾರಿಯನ್ನು ಡಿಕೆ.ಶಿವಕುಮಾರ್ ಅವರು ನಿಭಾಯಿಸಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು 135 ಸ್ಥಾನಗಳಲ್ಲಿ ಗೆಲ್ಲುವಂತೆ ಮಾಡಿದ್ದಾರೆ. ಹೀಗಾಗಿ ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಕೇಳುತ್ತಿದ್ದಾರೆಂದು ಹೇಳಿದರು.

ಹಿಂಸೆ, ಕಿರುಕುಳ, ಅವಮಾನ, ನಿಂದನೆಗಳನ್ನು ಡಿಕೆ.ಶಿವಕುಮಾರ್ ಎದುರಿಸಿದ್ದಾರೆ. ಎಲ್ಲಾ ಸವಾಲುಗಳನ್ನು ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಡಿ.ಕೆ.ಶಿವಕುಮಾರ್ ಕೇಳುತ್ತಿದ್ದಾರೆ. ಮುಂದಿನ ನಿರ್ಧಾರ ಹೈಕಮಾಂಡ್​ ಬಿಟ್ಟಿದ್ದು. ಇಂದು ಡಿಕೆಶಿ ದೆಹಲಿಗೆ ಆಗಮಿಸುತ್ತಿದ್ದು, ಎಐಸಿಸಿ ಅಧ್ಯಕ್ಷ ಹಾಗೂ ಇತರೆ ನಾಯಕರು ಕುಳಿತು ಚರ್ಚೆ ನಡೆಸಿ, ನಿರ್ಧಾರ ಕೈಗೊಳ್ಳುತ್ತಾರೆಂದು ತಿಳಿಸಿದರು.

Related