ಡಿಕೆಶಿಗೆ ಡಿಸಿಎಂ ಪಟ್ಟ ಬೇಸರ ವ್ಯಕ್ತಪಡಿಸಿದ ಡಿಕೆ ಸುರೇಶ್

ಡಿಕೆಶಿಗೆ ಡಿಸಿಎಂ ಪಟ್ಟ ಬೇಸರ ವ್ಯಕ್ತಪಡಿಸಿದ ಡಿಕೆ ಸುರೇಶ್

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಕೊನೆಗೂ ಮುಖ್ಯಮಂತ್ರಿಯ ಸ್ಥಾನ ಆಯ್ಕೆಯಾಗಿದ್ದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಪಟವನ್ನು ಏರಲಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ

ಇನ್ನು ದೆಹಲಿಯಲ್ಲಿ ಡಿಕೆ ಸುರೇಶ್ ಅವರ ಮಾತನಾಡಿ, ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆಯ್ಕೆ ಮಾಡಿದ್ದರಿಂದ ಖುಷಿಯಾಗಿಲ್ಲ. ಆದರೆ, ಸಾಗಬೇಕಾದ ಹಾದಿ ಬಹಳಷ್ಟಿದೆ ಎಂದು ಸಂಸದ, ಡಿಕೆ ಶಿವಕುಮಾರ್ ಸಹೋದರನೂ ಆಗಿರುವ ಡಿಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವ ಹೈಕಮಾಂಡ್ ಡಿಕೆ ಶಿವಕುಮಾರ್​ಗೆ ಡಿಸಿಎಂ ಪಟ್ಟ ನೀಡಿದೆ. ಈ ಬಗ್ಗೆ ಮಾತನಾಡಿದ ಸುರೇಶ್, ಡಿಕೆ ಶಿವಕುಮಾರ್​ಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂಬುದು ನಮ್ಮ ಹಾರೈಕೆಯಾಗಿತ್ತು ಎಂದು ಹೇಳಿದ್ದಾರೆ.

ನಿರ್ಧಾರದ ಬಗ್ಗೆ ನನಗೆ ಸಂಪೂರ್ಣ ಸಂತೋಷವಿಲ್ಲ. ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ. ಅದಕ್ಕಾಗಿಯೇ ಡಿಕೆ ಶಿವಕುಮಾರ್ ಹೈಕಮಾಂಡ್ ನಿರ್ಧಾರವನ್ನು ಒಪ್ಪಿಕೊಳ್ಳಬೇಕಾಯಿತು. ನಾವು ಸಾಕಷ್ಟು ದೂರ ಸಾಗಬೇಕಾಗಿದೆ. ಕಾದು ನೋಡೋಣ ಎಂದು ಡಿಕೆ ಸುರೇಶ್ ಹೇಳಿದ್ದಾರೆ.

 

Related