ಮುಂಬರುವ ಲೋಕಸಭಾ ಚುನಾವಣೆಗೆ ಡಿಕೆಶಿ ಮಾಸ್ಟರ್ ಪ್ಲಾನ್

ಮುಂಬರುವ ಲೋಕಸಭಾ ಚುನಾವಣೆಗೆ ಡಿಕೆಶಿ ಮಾಸ್ಟರ್ ಪ್ಲಾನ್

ಬೆಂಗಳೂರು: 2024ನೇ ಲೋಕಸಭಾ ಚುನಾವಣೆಗೆ ರಾಜ್ಯ ಮತ್ತು ಕೇಂದ್ರಗಳಲ್ಲಿ ಭರ್ಜರಿಯಾಗಿ ತಯಾರಿ ನಡೆಯುತ್ತಿತ್ತು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20 ರಿಂದ 22 ಕ್ಷೇತ್ರಗಳನ್ನು ಗೆಲ್ಲುವ ಭರವಸೆಯನ್ನು ಹೊಂದಿದೆ.

ಇನ್ನು ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಯಾರು ಮಾಡಿಕೊಂಡಿದ್ದಾರೆ. ಮರುನಾಮಕರಣಕ್ಕೂ ಮತ್ತು ಲೋಕಸಭಾ ಚುನಾವಣೆಗೂ ನಂಟಿದೆ ಎಂದು ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿದೆ.

ಹೌದು, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸುವುದರ  ಹಿಂದೆ ಲೋಕಸಭಾ ಚುನಾವಣೆಯ ಲೆಕ್ಕಾಚಾರಗಳಿವೆ ಎಂಬ ವಿಶ್ಲೇಷಣೆಗಳು ಕೇಳಿ ಬರುತ್ತಿವೆ. ತಮ್ಮ ಸಂಸದ ಡಿಕೆ ಸುರೇಶ್ ಗೆಲುವಿಗಾಗಿ ಈ ನಿರ್ಧಾರವನ್ನು ಡಿಕೆ ಶಿವಕುಮಾರ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಹೌದು, ಡಿಕೆ ಸುರೇಶ್ ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ರಾಜರಾಜೇಶ್ವರಿ ನಗರ, ಕುಣಿಗಲ್, ಆನೇಕಲ್, ಬೆಂಗಳೂರು ಉತ್ತರ ಸೇರಿದಂತೆ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಬೆಂಗಳೂರು ಗ್ರಾಮಾಂತರ ಒಳಗೊಂಡಿವೆ.

ಡಿಕೆ ಶಿವಕುಮಾರ್ ಲೆಕ್ಕಾಚಾರ ಏನು?

ಈ ಹಿನ್ನೆಲೆ ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಎಂದು ಮಾಡಲು ಡಿಕೆ ಶಿವಕುಮಾರ್ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದರಿಂದಾಗಿ ಬೆಂಗಳೂರಿಗೆ ಸೇರಿದ ಇಮೇಜ್ ರಾಮನಗರ ಜಿಲ್ಲೆಗೆ ಬರಲಿದೆ.

ಬೆಂಗಳೂರಿಗೆ ಸೇರಿದ್ರೆ ಇಲ್ಲಿಯ ರೈತರ ಜಮೀನುಗಳಿಗೆ ಒಳ್ಳೆಯ ಬೆಲೆ ಬರಲಿದೆ. ಇದರಿಂದ ಜಿಲ್ಲೆಯ ಜನರು ಮತ ಕೊಡ್ತಾರೆ ಎಂಬುವುದು ಡಿಕೆ ಶಿವಕುಮಾರ್ ಲೆಕ್ಕಾಚಾರ ಆಗಿದೆ ಎಂದು ಹೇಳಲಾಗಿದೆ.

Related