ವಿಶೇಷ ಪ್ಯಾಕೇಜ್ ಘೋಷಣೆ ವಿರುದ್ಧ ಡಿಕೆಶಿ ವಾಗ್ದಾಳಿ

ವಿಶೇಷ ಪ್ಯಾಕೇಜ್ ಘೋಷಣೆ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು: ಕೊರೋನಾ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕೇಳಿದ್ದೆವು. ನೆಪಮಾತ್ರಕ್ಕೆ ಮಾಡಿದ್ದಾರಷ್ಟೆ. ಈ ಪ್ಯಾಕೇಜ್ ಯಾವುದಕ್ಕೂ ಸಾಲುವುದಿಲ್ಲ. ಬಡಜನರ ಪರವಾಗಿ ಇರುವ ಸರ್ಕಾರ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

ಕೊರೋನಾ ಲಾಕ್‌ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ಬಡವರ್ಗದ ಜನರ ಅನುಕೂಲಕ್ಕಾಗಿ ಸಿಎಂ ಯಡಿಯೂರಪ್ಪ 1,250 ಕೋಟಿ ಮೊತ್ತದ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಈ ಪ್ಯಾಕೇಜ್‌ನಲ್ಲಿ ಕೃಷಿಕರನ್ನು ಕಡೆಗಣಿಸಿದೆ.

ರೈತರಿಗೆ ಯಾವುದೇ ಸಹಾಯಧನ ಕೊಟ್ಟಿಲ್ಲ. ಬೆಳೆ ಹಾನಿ ಬಗ್ಗೆ ಸರ್ವೇ ಕಾರ್ಯ ಆಗಬೇಕಿದೆ. ಪಡಿತರ ವಿತರಣೆ ಬಗ್ಗೆಯೂ ಗೊಂದಲ ಇದೆ. ಕೊರೋನಾ ವಾರಿಯರ್ಸ್ ಆಗಿ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ ಎಂದು ಕಿಡಿಕಾರಿದರು.

Related