ಡಿ.ಕೆ.ಶಿವಕುಮಾರ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ..!

ಡಿ.ಕೆ.ಶಿವಕುಮಾರ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ..!

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ​ ಹೊಸದಾಗಿ ಚಾರ್ಜ್​ಶೀಟ್ ಸಲ್ಲಿಕೆಯಾಗಿದ್ದು, ಇಡಿ ಅಧಿಕಾರಿಗಳು ಶಾಕ್​ ಕೊಟ್ಟಿದ್ದಾರೆ.

2019ರಲ್ಲಿ ನಡೆದಿದ್ದ ದಾಳಿ ಸಂಬಂಧ ಇಡಿ ಅಧಿಕಾರಿಗಳು ದೆಹಲಿ ವಿಶೇಷ ಕೋರ್ಟ್​ಗೆ ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. 2019ರಲ್ಲಿ ಡಿಕೆಶಿ ಮತ್ತು ಆಪ್ತರ ಮನೆಗಳ ಮೇಲೆ ಐಟಿ ದಾಳಿಯಾಗಿತ್ತು. ಈ ವೇಳೆ 8.5 ಕೋಟಿ ಹಣ ವರ್ಗಾವಣೆ ಪತ್ತೆಯಾಗಿತ್ತು. ಅಕ್ರಮ ಹಣ ವರ್ಗಾವಣೆ ಬಗ್ಗೆ ಐಟಿ ಇಡಿಗೆ ಶಿಫಾರಸ್ಸು ಮಾಡಿತ್ತು. ಇದೀಗ ಎರಡೂವರೆ ವರ್ಷಗಳ ಬಳಿಕ ಆರೋಪ ಪಟ್ಟಿಸಲ್ಲಿಕೆಯಾಗಿದೆ.

ಹೀಗಾಗಿ, ಡಿಕೆಶಿಗೆ ಮತ್ತೆ ಸಂಕಷ್ಟ ತರುವ ಸಾಧ್ಯತೆಯಿದೆ. ವಿಧಾನಸಭಾ ಚುನಾವಣೆಗೆ 11 ತಿಂಗಳು ಬಾಕಿಯಿದ್ದು, ಡಿಕೆಶಿ ರಾಜ್ಯಾದ್ಯಂತ ಪಕ್ಷವನ್ನ ಬಿರುಸಿನಿಂದ ಸಂಘಟಿಸುತ್ತಿದ್ದಾರೆ. ಹೀಗಾಗಿ, ಅವರ ವೇಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸಲ್ಲಿಕೆಯಾಯ್ತಾ? ಎಂಬ ಮೂಡಿದೆ.

Related