ಸಿಎಂ ಆಗಲು 2,500 ಕೋಟಿಗೆ ಬೇಡಿಕೆ : ಬಸನಗೌಡ ಪಾಟೀಲ ಯತ್ನಾಳ ವಿರುದ್ದ ಪ್ರತಿಕ್ರಿಸಿದ ಡಿಕೆಶಿ

ಸಿಎಂ ಆಗಲು 2,500 ಕೋಟಿಗೆ ಬೇಡಿಕೆ : ಬಸನಗೌಡ ಪಾಟೀಲ ಯತ್ನಾಳ ವಿರುದ್ದ ಪ್ರತಿಕ್ರಿಸಿದ ಡಿಕೆಶಿ

2,500 ಕೋಟಿ ನೀಡಿದರೆ ತಮ್ಮನ್ನು ಮುಖ್ಯಮಂತ್ರಿ ಮಾಡುವುದಾಗಿ ಬಿಜೆಪಿ ವರಿಷ್ಠರು ಹೇಳುತ್ತಿದ್ದಾರೆ ಎಂದು ಆ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಡಿರುವ ಆರೋಪದ ಕುರಿತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿದರು.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ಯತ್ನಾಳ ಸಾಮಾನ್ಯ ವ್ಯಕ್ತಿಯಲ್ಲ. ಬಿಜೆಪಿಯ ದೊಡ್ಡ ನಾಯಕ. ಸಂಸದ, ಶಾಸಕನಾಗಿ, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದವರು. ಮುಖ್ಯಮಂತ್ರಿ ಹುದ್ದೆ ನೀಡಲು ೨,೫೦೦ ಕೋಟಿಗೆ ಬೇಡಿಕೆ ಇಟ್ಟಿರುವುದು ಗಂಭೀರ ವಿಚಾರ. ಈ ಬಗ್ಗೆ ತಕ್ಷಣ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಕೋವಿಡ್‌ನಿಂದ ರಾಜ್ಯದಲ್ಲಿ ೪.೫ ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ನಾನು, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಲವರು ಹೇಳಿದ್ದೆವು. ಆದರೆ, ರ‍್ಕಾರ ಅದನ್ನು ಒಪ್ಪಿಕೊಂಡಿರಲಿಲ್ಲ. ರಾಜ್ಯದ ಆರೋಗ್ಯ ಸಚಿವರು ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದ್ದರು. ದೇಶದಲ್ಲಿ ಕೋವಿಡ್‌ನಿಂದ ೪೭ ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಈಗ ವರದಿ ನೀಡಿದೆ. ಇನ್ನಾದರೂ ರ‍್ಕಾರ ಸತ್ಯ ಒಪ್ಪಿಕೊಳ್ಳಲಿ ಎಂದು ಶಿವಕುಮಾರ್ ಹೇಳಿದರು.

Related