ಕಾಂಗ್ರೆಸ್ ಕಾರ್ಪೋರೇಟರ್ ಗೆ ಡಿಕೆಶಿ ಕಪಾಳ ಮೋಕ್ಷ! 

ಕಾಂಗ್ರೆಸ್ ಕಾರ್ಪೋರೇಟರ್ ಗೆ ಡಿಕೆಶಿ ಕಪಾಳ ಮೋಕ್ಷ! 

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಎಲ್ಲೆಡೆ ಭರ್ಜರಿ ತಯಾರಿ ನಡೆಸುತ್ತಿದ್ದು, ಭಾನುವಾರ ಮತ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಎಲ್ಲ ಅಭ್ಯರ್ಥಿಗಳ ಪರವಾಗಿ ಘಟಾನುಘಟಿ ನಾಯಕರುಗಳ ಮತ ಪ್ರಚಾರ ಮಾಡಿದ್ದಾರೆ.

ಇನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಹಾವೇರಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಭರ್ಜರಿ ಮತ ಪ್ರಚಾರ ಮಾಡಿದ್ದಾರೆ. ಮತ ಪ್ರಚಾರದ ಸಂದರ್ಭದಲ್ಲಿ ಹಾವೇರಿ ನಗರದಲ್ಲಿ ಕಾಂಗ್ರೆಸ್ನ ಕಾರ್ಪೊರೇಟ್ ಗೆ ಡಿಕೆ ಶಿವಕುಮಾರ್ ಅವರು ಕಪಾಳ ಮೋಕ್ಷ ಮಾಡಿದ್ದಾರೆ.

ಹೌದು, ಡಿಕೆ ಶಿವಕುಮಾರ್ ಅವರನ್ನು ನೋಡಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಕಾಂಗ್ರೆಸ್ ಕಾರ್ಪೊರೇಟ್ ಗೆ ಡಿಕೆ ಶಿವಕುಮಾರ್ ಅವರು ಕಪಾಳ ಮೋಕ್ಷ ಮಾಡಿದ್ದಾರೆ.

ಕಪಾಳ ಮೋಕ್ಷ ಮಾಡಿರುವ ವಿಡಿಯೋವನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಕಳೆದ ರಾತ್ರಿ ಡಿ. ಕೆ. ಶಿವಕುಮಾರ್‌ ಅವರು ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದೆ.

Related