ಬಿಜೆಪಿ ಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ, ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ : ಡಿಕೆಶಿ

ಬಿಜೆಪಿ ಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ, ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ : ಡಿಕೆಶಿ

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿರುವ ಡಿಕೆಶಿ, ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ. ಸಚಿವರೊಬ್ಬರು 40% ಕಮಿಷನ್ಕೇಳಿದ್ದಕ್ಕೆ ಕಾಂಟ್ರ್ಯಾಕ್ಟರ್ಆತ್ಮಹತ್ಯೆ ಮಾಡಿಕೊಂಡರು.

ರಾಜ್ಯ ಸರ್ಕಾರವು 40% ಕಮಿಷನ್ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘ ಸಾರ್ವಜನಿಕವಾಗಿ ಹೇಳಿದೆ. ಬಿಜೆಪಿ ಪ್ರಾಯೋಜಿತ ಪಿಎಸ್​ಐ ಹಗರಣ ಭೇದಿಸಿದ್ದರಿಂದ ಪೊಲೀಸ್ ನೇಮಕಾತಿ ಸ್ಥಗಿತಗೊಂಡಿದೆ. ಆದರೂ ಯಾರ ಮೇಲೂ ದಾಳಿ ನಡೆದಿಲ್ಲ, ಚಾರ್ಜ್ ಶೀಟ್ ಹಾಕಿಲ್ಲ ಎಂದು ಕಿಡಿಕಾರಿದ್ದಾರೆ.

Related