MSIL ಅಂಗಡಿಗೆ ಅವಕಾಶ ಕೊಡಬೇಡಿ

MSIL ಅಂಗಡಿಗೆ ಅವಕಾಶ ಕೊಡಬೇಡಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮದ್ಯ ಮಾರಾಟಗಾರರು, ಆನ್‌ಲೈನ್ ಮೂಲಕ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೂಡಲೆ ಕೈಬಿಡಬೇಕು ಎಂದು ಒತ್ತಾಯಿಸಿದರು.

ಐದು ಸಾವಿರ ಅಥವಾ ಅದಕ್ಕಿಂತಲೂ ಹೆಚ್ಚು ಜನಸಂಖ್ಯೆ ಇರುವ ಗ್ರಾ.ಪಂ ವ್ಯಾಪ್ತಿಯಲ್ಲಿ ಸಿಎಲ್ 6ಎ, ಸಿಎಲ್ 7 ಲೈಸೆನ್ಸ್ ಅನ್ನು ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡುವ ಆದೇಶ ರದ್ದುಪಡಿಸಬೇಕು. ಹೊಸ ಎಂಎಸ್‌ಐಎಲ್ ಮಳಿಗೆಗಳಿಗೆ ಅವಕಾಶ ನೀಡಬಾರದು.

ಕೋವಿಡ್ ಸಂದರ್ಭ ಮದ್ಯ ಮಾರಾಟಗಾರರಿಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟಗಾರರಿಂದ ಲಂಚಕ್ಕಾಗಿ ಗಂಭೀರ ತೊಂದರೆ ನೀಡುತ್ತಿರುವುದನ್ನು ತಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಸಿ.ಎಂ.ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Related