ಎಸ್‌ಎಲ್‌ಸಿ ಪರೀಕ್ಷೆಗೆ ಧಕ್ಕೆ ಬರದಿರಲಿ

ಎಸ್‌ಎಲ್‌ಸಿ ಪರೀಕ್ಷೆಗೆ ಧಕ್ಕೆ ಬರದಿರಲಿ

ಧಾರವಾಡ : ಲಾಕ್‌ಡೌನ್‌ನಿಂದ ಮುಂದೂಡಲ್ಪಟ್ಟಿದ್ದ ಎಸ್‌ಎಲ್‌ಸಿ ಪರೀಕ್ಷೆಗಳು ಜೂ.25 ಪ್ರಾರಂಭವಾಗಲಿದೆ. ಸಮಾಜದ ಕಟ್ಟಕಡೆಯ ವಿದ್ಯಾರ್ಥಿಯೂ ಪರೀಕ್ಷೆಗೆ ಹಾಜರಾಗುವಂತೆ ಆತ್ಮವಿಶ್ವಾಸ ಮೂಡಿಸಿ ಸಾರಿಗೆ ಸೌಲಭ್ಯ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಪರೀಕ್ಷೆಯ ಗಾಂಭಿರ್ಯತೆಗೆ ಧಕ್ಕೆ ಬರದಂತೆ ಪರೀಕ್ಷೆ ಆಯೋಜಿಸಲು ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಎಸ್‌ಎಲ್‌ಸಿ ಪರೀಕ್ಷಾ ಸಿದ್ಧತೆ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು ಪರೀಕ್ಷೆಗಳು ರದ್ದಾ ಮಾಡಬಾರದೆಂಬ ಆಶಯ ಮಕ್ಕಳು, ಬಹುತೇಕ ಶಿಕ್ಷಣ ತಜ್ಞರು ವ್ಯಕ್ತಪಡಿಸಿದ್ದಾರೆ. ವರ್ಷ ವಿಡೀ ಓದಿದ ಮಕ್ಕಳು ತಮ್ಮ ಪ್ರತಿಭೆ ಒರೆಗೆ ಹಚ್ಚಲು ಕಾತರರಾಗಿದ್ದಾರೆ.

ಘನ ಉಚ್ಚನ್ಯಾಯಾಲಯವು ಪರೀಕ್ಷೆ ಬರೆಯುವ ಎಲ್ಲ ಮಕ್ಕಳಿಗೂ ಸಾರಿಗೆ ಸೌಕರ್ಯ ಕಲ್ಪಿಸಲು ಸ್ಪಷ್ಟ ನಿರ್ದೇಶನ ನೀಡಿದೆ. ರಾಜ್ಯ ಸಾರಿಗೆ ಸಂಸ್ಥೆಯೊAದಿಗೆ ಚರ್ಚಿಸಿದ್ದು, ಸೂಕ್ತ ದರದಲ್ಲಿ ಬಸ್‌ಗಳನ್ನು ಒದಗಿಸಲು ಸಂಸ್ಥೆ ಸಿದ್ಧವಾದೆ. ಎಲ್ಲ ಜಿಲ್ಲೆಗಳಲ್ಲಿ ಮಕ್ಕಳನ್ನು ಕರೆತರುವ ಮಾರ್ಗದ ನಕ್ಷೆ ಸಿದ್ಧಪಡಿಸಲು, ಮಕ್ಕಳಲ್ಲಿ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಸೂಚಿಸಿದರು.

34 ಶೈಕ್ಷಣಿಕ ಜಿಲ್ಲೆಗಳಲ್ಲಿ ಮಾದರಿ ಪರೀಕ್ಷಾ ಕೊಠಡಿ ಸಿದ್ಧಪಡಿಸಿ ಸಾಮಾಜಿಕ ಜಾಲತಾಣಗಳಿಂದ ಅಲ್ಲಿನ ವಿಧಾನಗಳ ಬಗ್ಗೆ ಮಕ್ಕಳಿಗೆ  ಪರಿಚಯಿಸಬೇಕು. ವಿದ್ಯಾರ್ಥಿಗಳು ಮನೆಗಳಲ್ಲಿಯೇ ಮಾಸ್ಕ್ ಧರಿಸಿ ಪರೀಕ್ಷೆ ಬರೆಯುವ ಹವ್ಯಾಸ ರೂಢೀಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಿಬ್ಬಂದಿ ಕಡ್ಡಾಯವಾಗಿದೆ.

ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ, ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ 13 ಸಾವಿರ ವಿದ್ಯಾರ್ಥಿಗಳು ಹಾಸ್ಟೇಲ್ ಮತ್ತು ವಸತಿ ಶಾಲೆಗಳಲ್ಲಿ ವಾಸವಿವಿದಾರೆ. ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಹಾಸ್ಟೇಲ್ ಮತ್ತು ವಸತಿ ಶಾಲೆಗಳನ್ನು ಜೂ.15 ರೊಳಗೆ ಪುನರಾರಂಭಿಸಿದರೆ ಆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದರು.

Related