ಡಾಲಿ ಪಿಕ್ಚರ್ಸ್ 5ನೇ ಸಿನಿಮಾದ ಟೈಟಲ್ ರಿವಿಲ್

ಡಾಲಿ ಪಿಕ್ಚರ್ಸ್ 5ನೇ ಸಿನಿಮಾದ ಟೈಟಲ್ ರಿವಿಲ್

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡಾಲಿ ಧನಂಜಯ್ ಅವರು ತಮ್ಮದೇ ಆದ ನಿರ್ಮಾಣ ಸಂಸ್ಥೆಯನ್ನು ಹೊಂದಿದ್ದಾರೆ. ಈಗಾಗಲೇ ಈ ನಿರ್ಮಾಣ ಸಂಸ್ಥೆಯಲ್ಲಿ ನಾಲ್ಕು ಚಿತ್ರಗಳನ್ನು ಚಿತ್ರೀಕರಣ ಮಾಡಿ ಸಕ್ಸಸ್ ಕಂಡಿದ್ದಾರೆ. ಇದಾದ ಬಳಿಕ ಈಗ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯಿಂದ ಐದನೆಯ ಚಿತ್ರ ಸೆಟೆರಲು ರೆಡಿಯಾಗಿದೆ

ಹೌದು, ನಟ ರಾಕ್ಷಸರ ಡಾಲಿ ಧನಂಜಯ್ ನಿರ್ಮಾಣ ಮಾಡುತ್ತಿರುವ ಐದನೇ ಸಿನಿಮಾ ಜೆಸಿ ಚಿತ್ರವು ಇದೀಗ ತೆರೆ ಮೇಲೆ ಅಪ್ಪಳಿಸಲು ಸಜ್ಜಾಗಿದೆ. ಡಾಲಿ ಪಿಕ್ಚರ್ಸ್ ಇದೀಗ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ. ಈ ಬಾರಿ ಡಾಲಿ ಪಿಕ್ಚರ್ಸ್ ನಿಂದ ‘ನಡುವೆ ಅಂತರವಿರಲಿ’ ಖ್ಯಾತಿಯ ನಟ ಪ್ರಖ್ಯಾತ್ ಹೀರೊ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಸಿನಿಮಾಗೆ ‘ಜೆಸಿ ಎಂದು ಟೈಟಲ್ ಇಡಲಾಗಿದೆ. ಜೆಸಿ ಎಂದರೆ ಜ್ಯುಡಿಸಿಯಲ್‌ ಕಸ್ಟಡಿ. ಜೈಲಿಂದ ಹೊರ ಬಂದ ಯುವಕನ ಕಥೆ ಇದಾಗಿದೆ. ಸಿನಿಮಾದ ಮುಹೂರ್ತ ನೆರವೇರಿದೆ. ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಪೂಜೆ ಮಾಡುವ ಮೂಲಕ ಜೆಸಿ ಚಿತ್ರಕ್ಕೆ ಚಾಲನೆ ನೀಡಲಾಯಿತು. ಮುಹೂರ್ತದ ಸಮಯದಲ್ಲಿ ಇಡೀ ಸಿನಿಮಾತಂಡ ಹಾಜರಿತ್ತು.

 

Related