ಕ್ಯಾನ್ಸರ್ ಬಗ್ಗೆ ಭಯ ಬೇಡ, ಜಾಗೃತರಾಗಿರಿ

ಕ್ಯಾನ್ಸರ್ ಬಗ್ಗೆ ಭಯ ಬೇಡ, ಜಾಗೃತರಾಗಿರಿ

ಬೆಂಗಳೂರು: ವಿಶ್ವ ಕಾನ್ಸರ್ ದಿನದ ಅಂಗವಾಗಿ ಇಂದು (ಮಂಗಳವಾರ ಫೆ. 04) ರಂದು HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ವಿ. ಅನ್ಬುಕುಮಾರ್, ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ರವರು ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ನಿಯಮಿತ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿರುತ್ತದೆ. ನಿಗಮದ ಸಿಬ್ಬಂದಿಗಳು ಹಗಲಿರಳು ಎನ್ನದೆ, ಧೂಳು, ಮಾಲಿನ್ಯ ಮತ್ತು ಎಲ್ಲಾ ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಿಬ್ಬಂದಿಗಳು ಆರೋಗ್ಯವಾಗಿದಲ್ಲಿ ನಿಗಮವು ಆರೋಗ್ಯವಾಗಿರುತ್ತದೆ ಎಂಬ ಉದ್ದೇಶದಿಂದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆದುದರಿಂದ, ಈ ವರ್ಷವನ್ನು “Healthy Employees, Healthy KSRTC” ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ಪಕ್ಷ ಬಿಟ್ಟು ಹೋದವರಿಗೆ ತಕ್ಕ ಪಾಠ ಕಲಿಸಿದ್ದೇವೆ

ಕ್ಯಾನ್ಸರ್ ಜಾಗೃತಿಯ ಮಹತ್ವವನ್ನು ತಿಳಿಸಿ ಮತ್ತು ಜೀವಗಳನ್ನು ಉಳಿಸುವಲ್ಲಿ ಆರಂಭಿಕ ಹಸ್ತಕ್ಷೇಪವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಎಲ್ಲಾ ವಿಭಾಗಗಳಲ್ಲಿಯೂ ಸಹ ಕ್ಯಾನ್ಸ್ರ್ ಶಿಬಿರವನ್ನು ಆಯೋಜಿಸಲು ಸಂಬಂಧಪಟ್ಟವರಿಗೆ ಸೂಚಿಸಿದರು.

 

Related