ಗಣೇಶ್‌ಗೆ ಸಿಂಪಲ್ ಸುನಿ ನೀಡಿದ ಡಬಲ್ ಗಿಫ್ಟ್!

ಗಣೇಶ್‌ಗೆ ಸಿಂಪಲ್ ಸುನಿ ನೀಡಿದ ಡಬಲ್ ಗಿಫ್ಟ್!

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್‌ಗೆ 40ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕೊರೋನಾ ಕಾಲದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಗಣಿ ತಮ್ಮ ಅಭಿಮಾನಿಗಳಿಗೆ ಈ ಹಿಂದೆಯೇ ಮನವಿ ಮಾಡಿದ್ದರು. ಹಾಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಗೋಲ್ಡನ್‌ಸ್ಟಾರ್‌ಗೆ ಶುಭಾಶಯಗಳು ಕೋರುತ್ತಿದ್ದಾರೆ. ಮತ್ತೊಂದೆಡೆ ಗಣಿ ಹುಟ್ಟುಹಬ್ಬಕ್ಕೆ ನಿರ್ದೇಶಕ ಸಿಂಪಲ್ ಸುನಿ ಡಬಲ್ ಗಿಫ್ಟ್ ನೀಡಿದ್ದಾರೆ.

ನಟ ಗಣೇಶ್ ಅವರು ಸಿಂಪಲ್ ಸುನಿ ಅವರ ‘ದಿ ಸ್ಟೋರಿ ಆಫ್ ರಾಯಗಢ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಪೋಸ್ಟರ್ ಕೆಲ ದಿನಗಳ ಹಿಂದೆ ರಿಲೀಸ್ ಆಗಿದೆ. ಆ ಮೂಲಕ ಸಿಂಪಲ್ ಸುನಿ ಗಣೇಶ್ ಅವರಿಗೆ ಸರ್‌ಪ್ರೈಸ್ ನೀಡಿದ್ದರು.

ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಗಣಿ ಈ ವರ್ಷ ಎಂದಿನಂತಿಲ್ಲ. ಕೊರೋನಾದಿಂದಾಗಿ ನಮ್ಮ ಬದುಕಿನ ಶೈಲಿಯೇ ಬದಲಾಗಿದೆ. ಲಕ್ಷಾಂತರ ಮಂದಿ ನಿರುದ್ಯೋಗಿಗಳಾಗಿದ್ದಾರೆ, ಬಡಜನರು ದೈನಂದಿನ ಬದುಕನ್ನು ಸಾಗಿಸುವುದೇ ಕಷ್ಟ ಸಾಧ್ಯವಾಗಿದೆ. ನನ್ನ ನಾಡಿನ ಜನರು ಹೀಗೆ ಸಂಕಷ್ಟದಲ್ಲಿ ಇರುವಾಗ ವೈಭವದ ಹುಟ್ಟುಹಬ್ಬದ ಆಚರಣೆ ಯಾವುದೇ ಕಾರಣಕ್ಕೂ ಬೇಡವೆಂದು ನಿರ್ಧರಿಸಿದ್ದೇನೆ.

ಹೊರ ಜಿಲ್ಲೆಗಳಿಂದ ನನ್ನ ಅಭಿಮಾನಿಗಳು ಈ ಸಮಯದಲ್ಲಿ ಬೆಂಗಳೂರಿಗೆ ಬರುವುದು ಬೇಡ. ನೀವು ನನಗಾಗಿ ಖರ್ಚು ಮಾಡುವ ಹಣವನ್ನು, ಅದೇ ದಿನ ಬಡಕುಟುಂಬಗಳಿಗೆ ಸಹಾಯಹಸ್ತ ನೀಡಿ ಅದೇ ಅರ್ಥಪೂರ್ಣ ಆಚರಣೆಯಾಗುತ್ತದೆ. ನನಗೆ ಶುಭಕೋರಲು ನನ್ನ ನಿವಾಸಕ್ಕೆ ಬರುವುದು ಬೇಡ. ನೀವೆಲ್ಲಿದ್ದೀರೋ ಅಲ್ಲಿಂದಲೇ ನನಗೆ ಶುಭಕೋರಿ ಆಶೀರ್ವದಿಸಿ ಎಂದು ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದರು ಗೋಲ್ಡನ್ ಸ್ಟಾರ್.

Related