ಶೋಷಿತರ ಆಶಾಕಿರಣ ಬಾಬು ಜಗಜೀವನರಾಂ

ಶೋಷಿತರ ಆಶಾಕಿರಣ ಬಾಬು ಜಗಜೀವನರಾಂ

ಬೆಂಗಳೂರು: ಹಸಿರು ಕ್ರಾಂತಿ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪಪ್ರಧಾನಮಂತ್ರಿ ಡಾ.ಬಾಬು ಜಗಜೀವನರಾಂ ಅವರ ಆದರ್ಶ, ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದರು.

ವಿಧಾನಸೌಧದ ಆವರಣದಲ್ಲಿಂದು ಡಾ. ಬಾಬುಜಗಜೀವನರಾಂ ಅವರ ಪುಣ್ಯಸ್ಮರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಶೋಷಿತರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಮಹಾನ್ ನಾಯಕರಾದ ಡಾ. ಬಾಬುಜಗಜೀವನರಾಂ ಅವರು ಶೋಷಿತರ ಆಶಾಕಿರಣರಾಗಿದ್ದಾರೆ. ನಾಲ್ಕು ದಶಕಗಳ ಕಾಲ ಸಂಸತ್ ಸದಸ್ಯರಾಗಿ ಅಪರಿಮಿತವಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ, ರಾಷ್ಟ್ರದ ಕೃಷಿ ಸಚಿವರಾಗಿ ಹಸಿರು ಕ್ರಾಂತಿಗೆ ನೀಡಿದ ಕೊಡುಗೆ ಅಪಾರ. ಹಸಿರುಕ್ರಾಂತಿಯ ಹರಿಕಾರ ಎಂದೇ ಪ್ರಸಿದ್ಧಿಯಾಗಿರುವ ಇವರು ರಕ್ಷಣಾ ಸಚಿವರಾಗಿ ಗುರುತರವಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ರಾಷ್ಟ್ರದ ಬೆನ್ನೆಲುಬು ರೈತ ಹಾಗೂ ಯೋಧ ಈ ಎರಡೂ ಸಮುದಾಯಕ್ಕೆ ಡಾ. ಬಾಬು ಜಗಜೀವನ ರಾಂ ಅವರ ಮಾರ್ಗದರ್ಶನ ಹಾಗೂ ನಾಯಕತ್ವ ಉಲ್ಲೇಖನಾರ್ಹವಾಗಿದೆ. ಅವರ ಸಾಮಾಜಿಕ ಕಳಕಳಿ ಹಾಗೂ ರಾಜಕೀಯ ವಿಚಾರಧಾರೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

Related