ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ  ಬಿಬಿಎಂಪಿ ಆಯುಕ್ತರಿಂದ ಮಾಲಾರ್ಪಣೆ

ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ  ಬಿಬಿಎಂಪಿ ಆಯುಕ್ತರಿಂದ ಮಾಲಾರ್ಪಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ 67ನೇ ವರ್ಷದ ಮಹಾ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ರಾಮಚಂದ್ರನ್, ವಲಯ ಆಯುಕ್ತರಾದ ಸ್ನೇಹಲ್, ವಿನೋತ್ ಪ್ರಿಯಾ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related