ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿಬ್ಬಾಣ ದಿನ

 ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿಬ್ಬಾಣ ದಿನ

ಬೆಳಗಾವಿ: ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿಬ್ಬಾಣ ದಿನದ ಅಂಗವಾಗಿ ಸುವರ್ಣ ಸೌಧಧ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್  ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ, ಕೆ.ಹೆಚ್.ಮುನಿಯಪ್ಪ, ಬಿ.ನಾಗೇಂದ್ರ, ಡಾ.ಶರಣಪ್ರಕಾಶ ಪಾಟೀಲ ಸೇಡಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನಪರಿಷತ್ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಸೇರಿದಂತೆ ಅನೇಕ ಶಾಸಕರು, ಗಣ್ಯರು ಹಾಜರಿದ್ದರು.

Related