ಡಾ. ಪುನೀತ್ ರಾಜ್ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ

ಡಾ. ಪುನೀತ್ ರಾಜ್ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಪಂತರಪಾಳ್ಯದಲ್ಲಿ ನಿರ್ಮಿಸಿರುವ “ಡಾ. ಪುನೀತ್ ರಾಜ್ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ” ಹಾಗೂ ಅಭಿವೃದ್ಧಿಪಡಿಸಲಾಗಿರುವ “ನಾಯಂಡಹಳ್ಳಿ ಕೆರೆ” ಲೋಕಾರ್ಪಣೆಯನ್ನು ಸನ್ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ರವರು ನೆರವೇರಿಸಿದರು.

ಈ ವೇಳೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಆದ ಶ್ರೀ ವಿ.ಸೋಮಣ್ಣ, ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚವರಾದ ಡಾ. ಕೆ.ಸುಧಾಕರ್, ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅ.ದೇವೇಗೌಡ, ವಲಯ ಆಯುಕ್ತರಾದ ಡಾ. ಆರ್.ಎಲ್.ದೀಪಕ್, ಬೆಂಗಳೂರು ದಕ್ಣಿಣಾ ಜಿಲ್ಲಾ ಬಿಜೆಪಿ‌ ಘಟಕದ ಅಧ್ಯಕ್ಷರಾದ ಶ್ರೀ ಎನ್.ಆರ್.ರಮೇಶ್, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಟಿ.ಎ.ನಾರಾಯಣ ಗೌಡ, ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related