ಚಿತ್ರರಂಗಕ್ಕೆ ಕನಸಿನ ರಾಣಿ ಮಾಲಾಶ್ರೀ ಪುತ್ರಿ ಎಂಟ್ರಿ

  • In Cinema
  • August 5, 2022
  • 35 Views
ಚಿತ್ರರಂಗಕ್ಕೆ ಕನಸಿನ ರಾಣಿ ಮಾಲಾಶ್ರೀ ಪುತ್ರಿ ಎಂಟ್ರಿ

ಬೆಂಗಳೂರು ಆ5: ಡ್ಡೆಹುಡುಗರ ಕನಸಿನ ರಾಣಿಯಾಗಿ ಮಿಂಚಿರುವ ಮಾಲಾಶ್ರೀ ಪುತ್ರಿ ರಾಧನಾ ರಾಮ್ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಬಹುಭಾಷಾ ನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದ ಲೇಡಿ ಸೂಪರ್ ಸ್ಟಾರ್ ಮಾಲಾಶ್ರೀ ಪುತ್ರಿ ರಾಧನಾ ರಾಮ್ ಕೂಡ ಬಣ್ಣದ ಲೋಕಕ್ಕೆ ಎಂಟ್ರಿ ಕೊಡ್ತಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕ ರಾಮು ಅವರ ಸಾಧನೆ ಕೊಡುಗೆ ಅಪಾರ. ಮಾಲಾಶ್ರೀ ಮತ್ತು ರಾಮು ದಂಪತಿ ಸಾಕಷ್ಟು ವರ್ಷಗಳಿಂದ ಕಲಾಸೇವೆ ಮಾಡುತ್ತಲ್ಲೇ ಬಂದವರು. ಇದೀಗ ಈ ಕುಟುಂಬದಿಂದ ಜ್ಯೂ.ಮಾಲಾಶ್ರೀ ರಾಧನಾ ರಾಮ್ ಕೂಡ ಚಿತ್ರರಂಗದಲ್ಲಿ ಮಿಂಚಲು ಸಕಲ ತಯಾರಿ ಮಾಡಿಕೊಂಡು ಬಂದಿದ್ದಾರೆ

ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ ಮತ್ತು ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಬಿಗ್ ಬಜೆಜ್ ಸಿನಿಮಾದಲ್ಲಿ ರಾಧನಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಸದ್ಯ ಚಿತ್ರದ ರಾಧನಾ ಲುಕ್ ಕೂಡ ರಿವೀಲ್ ಆಗಿದ್ದು, ನಟಿಯ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ತಮ್ಮ ಮೊದಲ ಚಿತ್ರದಲ್ಲಿಯೇ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ತಾಯಿ ಮಾಲಾಶ್ರೀ ಅಂತೆಯೇ ನಾಯಕಿಯಾಗಿ ಮಿಂಚಲಿ ಎಂಬುದೇ ಅಭಿಮಾನಿಗಳ ಆಶಯ.

 

Related