ಬೆಳಗಾವಿ: ಹಾಡಹಗಲೇ ಗ್ರಾಮ ಲೆಕ್ಕಾಧಿಕಾರಿ ಕಂಠಪೂರ್ತಿ ಕುಡಿದು ತಹಶೀಲ್ದಾರ್ ಕಚೇರಿ ಮುಂದೆ ಮಲಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸವದತ್ತಿ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿ ಸಂಜು ಬೆಣ್ಣಿ ಕರ್ತವ್ಯದ ವೇಳೆಯಲ್ಲಿ ಮದ್ಯಪಾನ ಮಾಡಿ ಬೆಳಗಾವಿ ಜಿಲ್ಲೆಯ ಸವದತ್ತಿಯ ತಹಶೀಲ್ದಾರ್ ಕಚೇರಿ ಮುಂದೆ ಮಲಗಿರುವ ವಿಡಿಯೋ ವೈರಲ್ ಆಗಿದೆ.
ಗ್ರಾಮಲೆಕ್ಕಾಧಿಕಾರಿಯ ಈ ವರ್ತನೆ ಕಂಡೂ ಯಾವುದೇ ಕ್ರಮ ತೆಗೆದುಕೊಳ್ಳದೆ ತಾಲೂಕು ಆಡಳಿತ ಸುಮ್ಮನೆ ಕುಳಿತಿದ್ದು, ಈತನ ದುರ್ವವರ್ತನೆ ಕಂಡು ಸಾರ್ವಜನಿಕರು ಬೇಸತ್ತಿದ್ದಾರೆ.