ಸಚಿವ ಸಂಪುಟ ಒಪ್ಪಿಗೆ ನಂತರ ಚಾಲನೆ

ಸಚಿವ ಸಂಪುಟ ಒಪ್ಪಿಗೆ ನಂತರ ಚಾಲನೆ

ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ಮಲಪ್ರಭಾ ನದಿ ನೀರು ಪೂರೈಕೆಗೆ ಸುಮಾರು ಒಂದು ಸಾವಿರದ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಸಿದ್ಧಪಡಿಸಲಾಗಿದ್ದು ಸಚಿವ ಸಂಪುಟದ ಒಪ್ಪಿಗೆ ಪಡೆದ ನಂತರ ಯೋಜನೆ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಜಿಲ್ಲೆಯ ಶಾಸಕರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಯೋಜನೆ ಕುರಿತು ಹುಬ್ಬಳ್ಳಿಯಲ್ಲಿ ಗುರುವಾರ ಸಮಗ್ರವಾಗಿ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಅನುಷ್ಠಾನಕ್ಕೆ ಇಂದು ತಾತ್ವಿಕ ಒಪ್ಪಿಗೆ ನೀಡಲಾಗಿದೆ.

ಯೋಜನೆ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಒಪ್ಪಿಗೆ ಪಡೆದ ನಂತರ ಟೆಂಡರ್ ಪ್ರಕ್ರಿಯೆ ಶುರುವಾಗಲಿದೆ ಎಂದು ಹೇಳಿದರು.
ಕೇಂದ್ರ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸಹ ವಿಡಿಯೋ ಕಾನ್ಫರೆನ್ಸ್ ಮೂಲಕ ದೆಹಲಿಯಿಂದ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದರು.

Related