ನಮ್ಮ ರಸ್ತೆ (ನಮ್ಮ ಬೀದಿಗಳು) ಪ್ರದರ್ಶನ ಹಾಗೂ ಕಾರ್ಯಗಾರಕ್ಕೆ ಚಾಲನೆ

ನಮ್ಮ ರಸ್ತೆ (ನಮ್ಮ ಬೀದಿಗಳು) ಪ್ರದರ್ಶನ ಹಾಗೂ ಕಾರ್ಯಗಾರಕ್ಕೆ ಚಾಲನೆ

ಬೆಂಗಳೂರು: ಬಿಬಿಎಂಪಿಯು ಜಾಗತಿಕ ರಸ್ತೆ ಸುರಕ್ಷತೆಗಾಗಿ ಬ್ಲೂಮ್‌ಬರ್ಗ್ ಫಿಲಾಂತ್ರಪಿಸ್ ಇನಿಶಿಯೇಟಿವ್ ಅಡಿಯಲ್ಲಿ ಜ್ಞಾನ ಪಾಲುದಾರರಾಗಿ ಡಬ್ಲ್ಯುಆರ್‌ಐ ಇಂಡಿಯಾದ ಸಹಭಾಗಿತ್ವದಲ್ಲಿ ಡಿಸೆಂಬರ್ 08 ಹಾಗೂ 09, 2023ರಂದು 2 ದಿನಗಳ ಕಾಲ ಪಾಲಿಕೆ ಕೇಂದ್ರ ಕಛೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ “ನಮ್ಮ ರಸ್ತೆ” (ನಮ್ಮ ಬೀದಿಗಳು) ಪ್ರದರ್ಶನ ಹಾಗೂ ಕಾರ್ಯಗಾರಕ್ಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.

ಚಾಲನೆ ನೀಡಿದ ಬಳಿಕ ಮುಖ್ಯ ಆಯುಕ್ತರು ಮಾತನಾಡಿ, ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಗಾರವು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವಂತಹ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಗಾರದಲ್ಲಿ ಬಂದಂತಹ ಉತ್ತಮ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಗ್ಲೋಬಲ್ ಅರ್ಬನ್ ಮೊಬಿಲಿಟಿಯ ಉಪ ನಿರ್ದೇಶಕರು ಮತ್ತು ಆರೋಗ್ಯ ಮತ್ತು ರಸ್ತೆ ಸುರಕ್ಷತೆಯ ನಿರ್ದೇಶಕರು, ಸುಸ್ಥಿರ ನಗರಗಳಿಗಾಗಿ WRI ರಾಸ್ ಸೆಂಟರ್ ನ ಕ್ಲೌಡಿಯಾ ಆಡ್ರಿಯಾಜೋಲಾ-ಸ್ಟೀಲ್, ಜಾಗತಿಕ ರಸ್ತೆ ಸುರಕ್ಷತೆಗಾಗಿ ಬ್ಲೂಮ್‌ಬರ್ಗ್ ಫಿಲಾಂತ್ರಪೀಸ್ ಇನಿಶಿಯೇಟಿವ್ ನ ವೈಟಲ್ ಸ್ಟ್ರಾಟಜೀಸ್(ರಸ್ತೆ ಸುರಕ್ಷತೆ)ನಲ್ಲಿ ಹಿರಿಯ ವ್ಯವಸ್ಥಾಪಕರಾದ ಲೀವಾಂಟಾ ಮಿಲ್ಲರ್, ಇಂಜಿನಿಯರಿಂಗ್ ವಿಭಾಗದ ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related