ಋತುಚಕ್ರ ಯೋಜನೆಗೆ ಚಾಲನೆ – ಡಾ. ಕೆ. ಸುಧಾಕರ್

ಋತುಚಕ್ರ ಯೋಜನೆಗೆ ಚಾಲನೆ – ಡಾ. ಕೆ. ಸುಧಾಕರ್

ಚಾಮರಾಜನಗರ, ಜು 07 : ಹದಿಹರೆಯದ ಹೆಣ್ಣುಮಕ್ಕಳ ಸ್ವಚ್ಛ ಹಾಗೂ ಸುರಕ್ಷಿತ ಋತುಚಕ್ರ ನಿರ್ವಹಣೆಗಾಗಿ ಸರ್ಕಾರದ ವಿನೂತನ ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ವಿದ್ಯುಕ್ತ ಚಾಲನೆ ದೊರೆಯಿತು. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಇತಿಹಾಸ ಪ್ರಸಿದ್ದ ಪವಿತ್ರ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನ ಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಮೈತ್ರಿ ಮುಟ್ಟಿನ ಕಪ್ ಶುಚಿ ಯೋಜನೆಗೆ ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರಾದ ಡಾ. ಕೆ. ಸುಧಾಕರ್ ಅವರು ಚಾಲನೆ ನೀಡಿದರು.

ಇದೇ ವೇಳೆ ಮೈತ್ರಿ ಮುಟ್ಟಿನ ಕಪ್ ಯೋಜನೆಯ ಕುರಿತು ಜಾಗೃತಿ ಮೂಡಿಸುವ ವೀಡಿಯೋ ಅನ್ನು ಸಚಿವರು ಬಿಡುಗಡೆ ಮಾಡಿದರು. ಬಳಿಕ ಕಿರು ಅವಧಿಯ ವೀಡಿಯೋ ಪ್ರದರ್ಶಿಸಲಾಯಿತು. ಹೆಣ್ಣು ಮಕ್ಕಳಿಗೆ ಮುಟ್ಟಿನ ಕಪ್‌ನ್ನು ಗಣ್ಯರು ವಿತರಿಸಿದರು. ಯೋಜನೆಯ ಕುರಿತ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಋತು ಸ್ರಾವದ ಸಮಯದಲ್ಲಿ ಹೆಣ್ಣುಮಕ್ಕಳು ಅನುಭವಿಸುವ ವೇದನೆ, ನೋವು ಅರ್ಥ ಮಾಡಿಕೊಂಡು ಅವರಿಗಾಗಿ ರೂಪಿಸಿರುವ ಮೈತ್ರಿ ಮುಟ್ಟಿನ ಕಪ್ ಯೋಜನೆ ಅತ್ಯುತ್ತಮ ಕೊಡುಗೆಯಾಗಿದೆ ಎಂದು ತಿಳಿಸಿದರು.

ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ. ಶಾಂತಮೂರ್ತಿ ಕುಲಗಾಣ, ಬಿಳಿಗಿರಿರಂಗನಬೆಟ್ಟದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಾಕಮ್ಮ ನಾಗೇಶ್, ಉಪಾಧ್ಯಕ್ಷರಾದ ಪ್ರತಿಪ್ ಕುಮಾರ್, ಜಿಲ್ಲಾ ಬುಡಕಟ್ಟು ಅಭಿವೃದ್ದಿ ಸಂಘದ ಅಧ್ಯಕ್ಷರಾದ ಸಿ. ಮಹದೇವು, ತಾಲೂಕು ಸೋಲಿಗರ ಅಭಿವೃದ್ದಿ ಸಂಘದ ಅಧ್ಯಕ್ಷರಾದ ದಾಸೇಗೌಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ. ರಂದೀಪ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಎಂ. ಇಂದುಮತಿ, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ಡಾ. ಜಿ.ಎನ್. ಶ್ರೀನಿವಾಸ್, ಡಾ. ಬಿ.ವೀಣಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

Related