ಡ್ರಗ್ಸ್ : ತಪ್ಪಿತಸ್ಥರಿಗೆ ಕ್ರಮ ಕೈಗೊಳ್ಳಿ

ಡ್ರಗ್ಸ್ : ತಪ್ಪಿತಸ್ಥರಿಗೆ ಕ್ರಮ ಕೈಗೊಳ್ಳಿ

ಶಿಡ್ಲಘಟ್ಟ : ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾದಡಿ ಸಿಲುಕಿರುವ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಿ ಎಂದು ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಮೇಲೆ ಕ್ರಮ ಜರುಗಿಸಬೇಕು, ಎಂದು ರಾಜ್ಯದ ಯುವಕರನ್ನು ರಕ್ಷಣೆ ಮಾಡಲು ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕಬೇಕೆಂದು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

Related