1400 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ..!

  • In Crime
  • August 4, 2022
  • 237 Views
1400 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ..!

ಮುಂಬೈ, ಆಗಸ್ಟ್ 04 : ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿರುವ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು 1,400 ಕೋಟಿ ರೂಪಾಯಿ ಮೌಲ್ಯದ 700 ಕಿಲೋಗ್ರಾಂಗಳಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದಲ್ಲಿ ಐವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದರು. ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ಮುಂಬೈ ಅಪರಾಧ ವಿಭಾಗದ ನಾರ್ಕೋಟಿಕ್ ಸೆಲ್ ದಾಳಿ ನಡೆಸಿತ್ತು.

ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ತಂಡವು ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿತು, ಈ ಸಮಯದಲ್ಲಿ ನಿಷೇಧಿತ ಔಷಧವಾದ ಮೆಫೆಡ್ರೋನ್ ಅನ್ನು ತಯಾರಿಸಲಾಗುತ್ತಿದೆ ಎಂಬುದು ಕಂಡುಬಂದಿದೆ” ಎಂದು ಮಾಹಿತಿ ನೀಡಿದರು.

“ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಮುಂಬೈನಲ್ಲಿ ಬಂಧಿಸಿದ್ದರೆ, ಒಬ್ಬ ವ್ಯಕ್ತಿಯನ್ನು ನಲಸೋಪಾರಾದಲ್ಲಿ ಬಂಧಿಸಲಾಗಿದೆ. ಇತ್ತೀಚೆಗಿನ ದಿನಗಳಲ್ಲಿ ನಗರ ಪೊಲೀಸರು ದಾಳಿ ನಡೆಸಿ ಪತ್ತೆ ಹಚ್ಚಿದ ಅತಿ ಹೆಚ್ಚಿನ ಡ್ರಗ್ಸ್ ಇದಾಗಿದೆ” ಎಂದು ಪೊಲೀಸರು ಹೇಳಿದರು.

Related