ದ್ವಾರಕೀಶ್ ಪತ್ನಿ ಅಂಬುಜಾ ದ್ವಾರಕೀಶ್ ನಿಧನ

ದ್ವಾರಕೀಶ್ ಪತ್ನಿ ಅಂಬುಜಾ ದ್ವಾರಕೀಶ್ ನಿಧನ

ಬೆಂಗಳೂರು : ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಪತ್ನಿ ಅಂಬುಜಾ (80 ವರ್ಷ) ಅವರು ಶುಕ್ರವಾರ ವಿಧಿವಶರಾಗಿದ್ದಾರೆ.
ಎಚ್‌ಎಸ್‌ಆರ್ ಲೇಔಟ್‌ನ ತಮ್ಮ ಸ್ವಗೃಹದಲ್ಲಿ ಅಂಬುಜಾ ಅವರು ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಮೃತ ಅಂಬುಜಾ ಅವರಿಗೆ 80 ವರ್ಷ ವಯಸ್ಸಾಗಿತ್ತು. ಮಕ್ಕಳಾದ ನಿರ್ಮಾಪಕ ಯೋಗಿ ದ್ವಾರಕೀಶ್ ಸೇರಿದಂತೆ ಐದು ಮಂದಿ ಗಂಡು ಮಕ್ಕಳು ಮತ್ತು ಪತಿ ದ್ವಾರಕೀಶ್ ಅವರನ್ನು ಅವರು ಅಗಲಿದ್ದಾರೆ. ಶುಕ್ರವಾರ ಸಂಜೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಂಬುಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಎಚ್‌ಎಸ್‌ಆರ್ ಲೇಔಟ್‌ನ ಅಪಾರ್ಟ್ಮೆಂಟ್‌ನಲ್ಲಿ ಸದ್ಯ ಅಂಬುಜ ಪಾರ್ಥೀವ ಶರೀರ ಇಡಲಾಗಿತ್ತು. ಶುಕ್ರವಾರ ಸಂಜೆ ಅಂತ್ಯಕ್ರಿಯೆ ನಡೆಸಲಾಯಿತು.

Related