ಇ. ತುಕಾರಾಂ ರಾಜಿನಾಮೆ ಸಾಧ್ಯತೆ!

ಇ. ತುಕಾರಾಂ ರಾಜಿನಾಮೆ ಸಾಧ್ಯತೆ!

ಬಳ್ಳಾರಿ: ಲೋಕಸಭಾ ಚುನಾವಣೆ 2024ನೇ ಸಾಲಿನಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಹುಮತಗಳ ಅಂತರದಲ್ಲಿ ಗೆದ್ದಿರುವ ನೂತನ ಸಂಸದರಾಗಿ ಆಯ್ಕೆಯಾಗಿರುವ ಇ ತುಕಾರಾಂ ಅವರು ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಹೋಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗದ ಆರೋಪದ ಮೇಲೆ ಸಿದ್ದರಾಮಯ್ಯ ಸಂಪುಟದಿಂದ ಬಿ ನಾಗೇಂದ್ರ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ತುಕಾರಾಮ್ ಅವರ ಅನುಯಾಯಿಗಳು ಮತ್ತು ಬೆಂಬಲಿಗರು ಕೆಲವು ದಿನಗಳ ಹಿಂದೆ ನಾಗೇಂದ್ರ ಅವರ ರಾಜೀನಾಮೆಯ ಸೂಚನೆಯನ್ನು ಪಡೆದ ನಂತರ, ಸಭೆ ನಡೆಸಿ ತಮ್ಮ ನಾಯಕನನ್ನು ಸಂಪುಟಕ್ಕೆ ಸೇರ್ಪಡೆ ಮಾಬೇಕೆಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ತುಕಾರಾಂ ಅವರು ಬಳ್ಳಾರಿಯಲ್ಲಿ ಬಿಜೆಪಿಯ ಬಿ ಶ್ರೀರಾಮುಲು ಅವರನ್ನು ಭಾರಿ ಅಂತರದಿಂದ ಸೋಲಿಸಿದ್ದಾರೆ. ತುಕಾರಾಂ ಅವರು ಇದೀಗ ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.

ಒಂದು ವೇಳೆ ಕಾಂಗ್ರೆಸ್‌ ಹೈಕಮಾಂಡ್‌ ಸಚಿವ ಸಂಪುಟದ ಬೇಡಿಕೆಯನ್ನು ಈಡೇರಿಸಿದರೆ, ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪುತ್ರಿ ಸೌಪರ್ಣಿಕಾಗೆ ಬಳ್ಳಾರಿ ಲೋಕಸಭೆ ಟಿಕೆಟ್‌ ಕೇಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

 

Related