ಕಣ್ಣಿನ ಸಮಸ್ಯೆಗೆ ಹೀರೆಕಾಯಿಯನ್ನು ಸೇವಿಸಿ!

ಕಣ್ಣಿನ ಸಮಸ್ಯೆಗೆ ಹೀರೆಕಾಯಿಯನ್ನು ಸೇವಿಸಿ!

ನಾವು ಪ್ರತಿನಿತ್ಯ ಬಳಸುವಂತಹ ತರಕಾರಿಗಳಲ್ಲಿ ಒಂದಾದ ಹಿರೇಕಾಯಿಯನ್ನು ನಾವು ಸೇವಿಸುವುದರಿಂದ ನಮ್ಮಲ್ಲಿ ಕಾಡುವಂತಹ ಹಲವಾರು ಸಮಸ್ಯೆಗಳನ್ನು ನೀಗಿಸಿಕೊಳ್ಳಬಹುದು.

ಹೌದು ಹೀರೆಕಾಯಿಯನ್ನು ನಾವು ಕ್ರಮೇಣವಾಗಿ ಪ್ರತಿನಿತ್ಯ ನಮ್ಮ ಆಹಾರದಲ್ಲಿ ಸೇವಿಸಿದರೆ ನಮ್ಮ ಕಣ್ಣಿನ ದೃಷ್ಟಿಯನ್ನು ಕಾಪಾಡಿಕೊಳ್ಳಬಹುದು.

ಹೀರೆಕಾಯಿಯಲ್ಲಿ ವಿಟಮಿನ್ ‘ ಎ ‘ ಅಂಶ ಗಣನೀಯ ಪ್ರಮಾಣದಲ್ಲಿ ಹೇರಳವಾಗಿದ್ದು, ಕಣ್ಣಿನ ದೃಷ್ಟಿಗೆ ತುಂಬಾ ಸಹಕಾರಿಯಾಗಿದೆ ಎಂದು ಸ್ವತಃ ಕಣ್ಣಿನ ತಜ್ಞರೇ ಹೇಳುತ್ತಾರೆ. ಮುಖ್ಯವಾಗಿ ವಯಸ್ಸಾದವರಲ್ಲಿ ಎದುರಾಗುವ ಕಣ್ಣಿನ ಪೊರೆ ಸಮಸ್ಯೆಯನ್ನು ಹೀರೆಕಾಯಿಯಲ್ಲಿರುವ ಬೀಟಾ ಕ್ಯಾರೋಟಿನ್ ಎಂಬ ವಿಟಮಿನ್ ‘ ಎ ‘ ಅಂಶದ ರೂಪ ಸರಿಪಡಿಸುತ್ತದೆ. ಇದರ ಜೊತೆಗೆ ಕಣ್ಣಿನ ಹಲವು ಸಮಸ್ಯೆಗಳನ್ನು ಹೀರೆಕಾಯಿಯಲ್ಲಿರುವ ಔಷಧೀಯ ಪರಿಣಾಮಗಳು ಸರಿ ಮಾಡುತ್ತವೆ.

ಹೀರೆಕಾಯಿ ಒಂದು ಆಂಟಿ ಆಕ್ಸಿಡೆಂಟ್ ಕೂಡ ಆಗಿದ್ದು, ಇದರಲ್ಲಿರುವ ಬೀಟಾ ಕ್ಯಾರೋಟಿನ್ ಅಂಶ ಕಣ್ಣಿನ ನರಗಳನ್ನು ಮತ್ತು ಕಣ್ಣಿಗೆ ಸಂಪರ್ಕ ಮಾಡುವ ರಕ್ತ ನಾಳಗಳನ್ನು ಯಾವುದೇ ವಿಷಕಾರಿ ಅಂಶಗಳಿಂದ ಪ್ರಭಾವಿತ ಆಗದಂತೆ ನೋಡಿಕೊಂಡು ಫ್ರೀ ರಾಡಿಕಲ್ ಗಳ ಹಾನಿಯಿಂದ ಕಣ್ಣುಗಳ ರಕ್ಷಣೆ ಮಾಡುತ್ತವೆ.

ಹೀರೆಕಾಯಿಯಲ್ಲಿ ಕಬ್ಬಿಣದ ಅಂಶ ಸಾಕಷ್ಟಿದೆ. ಹಾಗಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ಪ್ರತಿ ದಿನ ಸಾಂಬಾರ್ ಅಥವಾ ಸಾಗು ತಯಾರು ಮಾಡುವ ನೆಪದಲ್ಲಿ ಬಳಸಬಹುದು. ಇಡೀ ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ದೇಹದಲ್ಲಿನ ಕಬ್ಬಿಣದ ಅಂಶದ ಕೊರತೆಯನ್ನು ನೀಗಿಸುತ್ತದೆ.

ವರದಿಗಾರ :

ಪ್ರವೀಣ ಬೆಳಗಾವಿ

 

Related