ದೇವಸ್ಥಾನದ ಪ್ರಸಾದ ಸೇವಿಸಿ; 70 ಮಂದಿ ಅಸ್ವಸ್ಥ

ದೇವಸ್ಥಾನದ ಪ್ರಸಾದ ಸೇವಿಸಿ; 70 ಮಂದಿ ಅಸ್ವಸ್ಥ

ಮಂಡ್ಯ : ಮಾರಮ್ಮನ ದೇವಾಲಯದಲ್ಲಿ ವಿತರಿಸಿದ್ದ ಪುಳಿಯೋಗರೆ ಪ್ರಸಾದ ಸೇವಿಸಿ 70ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿ ನಡೆದಿದೆ.

ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿನ ಮಾರಮ್ಮನ ದೇವಾಲಯದಲ್ಲಿ ಅ.27ರ ರಾತ್ರಿ ಪ್ರಸಾದದ ರೂಪದಲ್ಲಿ ಪುಳಿಯೋಗರೆಯನ್ನು ದೇವಸ್ಥಾನಕ್ಕೆ ಬಂದಿದ್ದ ಭಕ್ತಾದಿಗಳಿಗೆ ಹಂಚಲಾಗಿತ್ತು. ಈ ಪ್ರಸಾದ ಸೇವಿಸಿ ನಂತರ ಸುಮಾರು ಎಪ್ಪತ್ತಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಸಾದ ಸೇವಿಸಿದ ನಂತರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಅಸ್ವಸ್ಥಗೊಂಡ 70ಕ್ಕೂ ಹೆಚ್ಚು ಜನರನ್ನು ಕೂಡಲೇ ಮಳವಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related