ಈ ಕಹಿ ಕಾಯಿ ತಿಂದರೆ ಆರೋಗ್ಯಕ್ಕೆ ಹಲವಾರು ಲಾಭಗಳು

ಈ ಕಹಿ ಕಾಯಿ ತಿಂದರೆ ಆರೋಗ್ಯಕ್ಕೆ ಹಲವಾರು ಲಾಭಗಳು

ಪ್ರತಿನಿತ್ಯದ ನಮ್ಮ ದಿನಾಚರಣೆಯಲ್ಲಿ ಹಲವಾರು ವ್ಯತ್ಯಾಸಗಳಾಗುವುದುಂಟು ಇದಕ್ಕೆ ಕಾರಣವೇನೆಂದರೆ, ನಮ್ಮ ದಿನನಿತ್ಯದ ಆಹಾರ ವ್ಯವಸ್ಥೆಯಲ್ಲಿ ಬದಲಾಗುವುದರಿಂದ ಆರೋಗ್ಯದಲ್ಲಿ ಏರುಪೇರು ಆಗುವುದುಂಟು. ನಮ್ಮ ಆರೋಗ್ಯವನ್ನು ಹೇಗೆ ನಾವು ನಮ್ಮ ಹತೋಟಿಯಲ್ಲಿ ಇಟ್ಟುಕೊಳ್ಳಬಹುದು ಅದಕ್ಕೆ ಹಾಗಲಕಾಯಿಯನ್ನು ಹೇಗೆ ಉಪಯೋಗಿಸಬಹುದು ಎಂಬುದು ನಾವೆಂದು ತಿಳಿಯೋಣ.

ಹಾಗಲಕಾಯಿ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆ ನೀಡದೇ ಮಾಗಲು ಸಾಧ್ಯವಾಗುತ್ತದೆ.

ಮಧುಮೇಹವನ್ನು ಗುಣಪಡಿಸಲು ಸಮರ್ಥವಿರುವ ಸಿದ್ಧ ಆಹಾರವೆಂದರೆ ಅದು ಪ್ರಥಮವಾಗಿ ಹಾಗಲಕಾಯಿ, ಆದರೆ ಇದರ ಕಹಿರುಚಿಯನ್ನು ಸಹಿಸುವ ಮನಸ್ಸಾಗಬೇಕು ಅಷ್ಟೇ. ಹಾಗಲಕಾಯಿಯನ್ನು ತರಕಾರಿಯ ರೂಪದಲ್ಲಿ ಸೇವಿಸುವುದಕ್ಕಿಂತ ಹೆಚ್ಚು ಪರಿಣಾಮವನ್ನು ಅದರ ಜ್ಯೂಸ್ ಮಾಡಿಕೊಂಡು ಕುಡಿಯುವ ಮೂಲಕ ಪಡೆಯಬಹುದು.

ನಾವು ಪ್ರತಿದಿನ ಬೆಳಿಗ್ಗೆ ಒಂದು ಲೋಟ ಹಾಗಲಕಾಯಿಯ ರಸವನ್ನು ಖಾಲಿಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ.

ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣ ವ್ಯಾಧಿ ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ ಅತ್ಯಂತ ಪರಿಣಾಮಕಾರಿಯಾಗಿದೆ. ವಾರಕ್ಕೊಮ್ಮೆ ಬೆಳಿಗ್ಗೆದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ.

ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ ಕಣ್ಣುಗಳನ್ನು ಕಾಪಾಡುತ್ತವೆ.

ಹಾಗಲಕಾಯಿಯಲ್ಲಿ ಫೈಟೋನ್ಯೂಟ್ರಿಯೆಂಟ್‌ಗಳೆಂಬ ಆಂಟಿ ಆಕ್ಸಿಡೆಂಟುಗಳಿದ್ದು ಇವು ಕೆಟ್ಟ ಕೊಲೆಸ್ಟಾಲ್ ಕಣಗಳನ್ನು ತಮ್ಮೊಂದಿಗೆ ಅಂಟಿಸಿಕೊಂಡು ಹೋಗುವ ಕ್ಷಮತೆ ಪಡೆದಿವೆ. ಹಾಗಲಕಾಯಿಯನ್ನು ತರಕಾರಿಯ ರೂಪದಲ್ಲಿ ಆಲಿವ್ ಎಣ್ಣೆಯೊಡನೆ ಸೇವಿಸಿದರೆ ಕೊಂಚ ಕಹಿ ಎನಿಸಿದರೂ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವ ಮೂಲಕ ಆರೋಗ್ಯವನ್ನು ವೃದ್ಧಿಸುತ್ತದೆ.

ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸವನ್ನು ಸೇವಿಸುವುದರಿಂದ ರಕ್ತ ಶುದ್ಧಿಗೊಂಡು ಚರ್ಮದ ವಿವಿಧ ತೊಂದರೆಗಳು ಮಾಯವಾಗಿ ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.

ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ ೬ ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.

 

Related