ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ

ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ

ಕೋಲಾರ: ಇಂದು (ಸೋಮವಾರ ಜ. 8) ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನ ಶಾಸಕ ಕೆ ವೈ ನಂಜನಗೂಡು ಅವರ ಮನೆ ಮೇಲೆ ಮತ್ತು ಕಚೇರಿ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನೀಡಿದ್ದಾರೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಅಧ್ಯಕ್ಷ ಮಾಲೂರು ಶಾಸಕರಾಗಿರುವ ಕೆ ವೈ ನಂಜುನಗೌಡ ಅವರು ಕೋಚಿಮುಲ್ ನೇಮಕತಿಯಲ್ಲಿ ಅವ್ಯವಾರ ನಡೆದಿದೆ ಎಂಬ ಆರೋಪದ ಮೇರೆಗೆ ಇಂದು ಇಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ.

ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿರುವ ಮನೆ, ಹುತ್ತೂರು ಹೋಬಳಿ ಕೋಚಿಮುಲ್ ಕಚೇರಿಯಲ್ಲಿ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಂಜೇಗೌಡ ಅವರ ಆಪ್ತ ಸಹಾಯಕ ಹರೀಶ್, ಕೋಚಿಮುಲ್ ಅಡ್ಮಿನ್ ಮ್ಯಾನೇಜರ್ ನಾಗೇಶ್, ಕೋಚಿಮುಲ್​​ ವ್ಯವಸ್ಥಾಪಕ ನಿರ್ದೇಶಕ ಗೋಪಾಲ್​ಮೂರ್ತಿ ನಿವಾಸದ ಮನೆ ಮೇಲೂ ದಾಳಿ ಮಾಡಿದ್ದಾರೆ. ಕೆ.ವೈ.ನಂಜೇಗೌಡ ಅವರ ಬೆಂಗಳೂರು ನಿವಾಸ, ಮಾಲೂರು ಕೋಚಿಮುಲ್ ಕಚೇರಿ ಸೇರಿದಂತೆ ಒಟ್ಟು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

 

 

Related