ಎಸ್ಐಟಿ ತನಿಖೆ ನಡೆಯುತ್ತಿರುವಾಗ ಇಡಿ ದಾಳಿ ಅನಾವಶ್ಯಕ: ಡಿಕೆಶಿ

ಎಸ್ಐಟಿ ತನಿಖೆ ನಡೆಯುತ್ತಿರುವಾಗ ಇಡಿ ದಾಳಿ ಅನಾವಶ್ಯಕ: ಡಿಕೆಶಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆಯನ್ನು ನಡೆಸುತ್ತದೆ. ತನಿಖೆ ಆದ ಮೇಲೆ ಈ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂದು ಹೊರಬರುತ್ತದೆ. ತಪ್ಪಿತಸ್ಥರು ಯಾರೇ ಇದ್ದರೂ ಕೂಡ ಅವರಿಗೆ ಶಿಕ್ಷೆ ಕೊಡಲು ನ್ಯಾಯಾಲಯ ಇದೆ, ಹಾಗಾಗಿ ತನಿಖೆ ಆಗುವವರೆಗೂ ಕಾಯಬೇಕಿತ್ತು ಆದರೆ ಇಡಿ ಅಧಿಕಾರಿಗಳು ಯಾವುದೇ ಪ್ರಕರಣ ದಾಖಲಾಗದೆ ಇದೀಗ ಇಡಿ ದಾಳಿ ಮಾಡಿರೋದು ಅಗತ್ಯವಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ವಂಚನೆ ನಡೆದಿರುವುದು ಸತ್ಯ. ಈ ಪ್ರಕರಣದ ಸತ್ಯಾಸತ್ಯತೆ ನಮಗೆ ಗೊತ್ತಿದೆ. ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದ್ದು, ಅಕ್ರಮವಾಗಿ ವರ್ಗಾವಣೆಯಾಗಿದ್ದ ಹಣವನ್ನು ಈಗಾಗಲೇ ವಶಪಡಿಸಿಕೊಳ್ಳುತ್ತಿದೆ. ನಿರ್ದಿಷ್ಟ ಮೊತ್ತಕ್ಕಿಂತ ಹೆಚ್ಚಿನ ಪ್ರಮಾಣದ ಅವ್ಯವಹಾರವಾದರೆ ಸಿಬಿಐ ತನಿಖೆ ಮಾಡುವ ಅಧಿಕಾರವಿದೆ. ಈ ಎಲ್ಲಾ ತನಿಖೆ ಮುಕ್ತಾಯದ ನಂತರ ಈ ತನಿಖೆಗೆ ಸರಿಯಾಗಿ ನಡೆದಿದೆಯೇ ಎಂದು ಇ.ಡಿ ಪರಾಮರ್ಶನೆ  ಮಾಡಬಹುದಿತ್ತು. ಇದನ್ನೂ ಓದಿ: ಆಗಿರುವ ತಪ್ಪು ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ

ಆದರೆ ಇ.ಡಿ ಯವರು ಯಾವುದೇ ದೂರು ಇಲ್ಲದಿದ್ದ ಕಾರಣ, ದಾಳಿ ಮಾಡುವ ಅಗತ್ಯವಿರಲಿಲ್ಲ. ಇ.ಡಿ ಅವರು ಯಾವ ರೀತಿ ತನಿಖೆ ಮಾಡುತ್ತಿದ್ದಾರೆ, ಯಾವ ಪ್ರಕ್ರಿಯೆ ಮೇಲೆ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಎಸ್ಐಟಿ ತನಿಖೆ ಮುಕ್ತವಾಗಿ ನಡೆಯುತ್ತಿದ್ದು, ತನಿಖೆಗೆ ಅಡಚಣೆಯಾಗಬಾರದು ಎಂಬ ಉದ್ದೇಶಕ್ಕೆ ಮಂತ್ರಿಗಳು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ. ನಾವು ಕೂಡ ಕ್ರಾಸ್ ಚೆಕ್ ಮಾಡಿದ್ದು, ಸಚಿವರು ಯಾವುದೇ ಸಹಿ ಮಾಡಿಲ್ಲ. ಅವರ ಹಸ್ತಕ್ಷೇಪವಿಲ್ಲ. ಕಾನೂನು ಪ್ರಕಾರ ತನಿಖೆ ನಡೆಯುತ್ತಿದ್ದು, ಈ ಮಧ್ಯೆ ಇ.ಡಿ ದಾಳಿ ಮಾಡಿದೆ. ನೋಡೋಣ ಏನು ಮಾಡುತ್ತಾರೆ ಎಂದರು.

 

Related