ಮೌಲ್ಯಯುತವಾದ ಬದುಕಿಗೆ ಶಿಕ್ಷಣ ಮುಖ್ಯ: ಶರಣಬಸಪ್ಪ ದರ್ಶನಾಪುರ

ಮೌಲ್ಯಯುತವಾದ ಬದುಕಿಗೆ ಶಿಕ್ಷಣ ಮುಖ್ಯ: ಶರಣಬಸಪ್ಪ ದರ್ಶನಾಪುರ

ಯಾದಗಿರಿ: ದೇಶದ ಅಭಿವೃದ್ಧಿ ಹಾಗೂ ಸದೃಢ ದೇಶ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಶಿಕ್ಷಕರು ಮಕ್ಕಳ ಉತ್ತಮ ಶಿಕ್ಷಣಕ್ಕೆ ಶ್ರಮಿಸಿ ಜಿಲ್ಲೆಗೆ ಹೆಚ್ಚಿನ ಫಲಿತಾಂಶ ತರುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ 2024-25 ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ಶಾಲೆಗಳಿಗೆ ಹೆಚ್ಚಾಗಿ ಬಡ ಮಕ್ಕಳೇ ಬರುತ್ತಾರೆ. ಆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎತ್ತರಕ್ಕೆ ತರುವ ಬೆಳೆಸುವ ಕೆಲಸ ನಿಮ್ಮದಾಗಬೇಕು. ಮೌಲ್ಯಯುತವಾದ ಬದುಕಿಗೆ ಶಿಕ್ಷಣ ಮುಖ್ಯ. ಕಲ್ಯಾಣ ಕರ್ನಾಟಕ ಭಾಗಕ್ಕೆ 371 ಜೆ ವಿಶೇಷ ಸ್ಥಾನ ಸಿಕ್ಕಿದ್ದು, ಇದರಿಂದ ಈ ಭಾಗದ ಜನರಿಗೆ ಸರಕಾರಗಳ ಯೋಜನೆಗಳು, ಶಿಕ್ಷಣಕ್ಕಾಗಿ ವಿಶೇಷ ಸೌಲಭ್ಯಗಳು, ಇನ್ನಿತರ ಅವಕಾಶಗಳು ಸಿಕ್ಕಿದ್ದು ಅವುಗಳ ಸದ್ಬಳಕೆ ಆಗಬೇಕು ಎಂದರು. ಇದನ್ನೂ ಓದಿ: ಕೌಶಲ್ಯ ಅಭಿವೃದ್ಧಿಗಾಗಿ ಕಾಂಗ್ಸ್‌ಬರ್ಗ್ ಡಿಜಿಟಲ್‌ ಸಂಸ್ಥೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಹ್ವಾನ

ವಿಧಾನ ಪರಿಷತ್ತು ಶಾಸಕ ಚಂದ್ರಶೇಖರ ಬಿ ಪಾಟೀಲ್ ಮಾತನಾಡಿ, ಮನುಷ್ಯ ಹೃದಯ ಎಷ್ಟು ಮುಖ್ಯವೋ ಹಾಗೆಯೇ ಸುಂದರ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಅವಶ್ಯಕತೆ ಬಹಳ ಇದೆ ಎಂದರು. ಸರ್ಕಾರಿ ನೌಕರರಿಗೆ ಇರುವ ಪಿಂಚಣಿ ವ್ಯವಸ್ಥೆಯ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

 

Related