ಪಧವೀಧರ & ಶಿಕ್ಷಕರ ಕ್ಷೇತ್ರ ಚುನಾವಣೆ ಕರಡು ಮತದಾರರ ಪಟ್ಟಿ ಪಕ್ರಟ

ಪಧವೀಧರ & ಶಿಕ್ಷಕರ ಕ್ಷೇತ್ರ ಚುನಾವಣೆ ಕರಡು ಮತದಾರರ ಪಟ್ಟಿ ಪಕ್ರಟ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಆರ್. ರಾಮಚಂದ್ರನ್ ರವರು ಇಂದು ಪ್ರಕಟಿಸಿದರು.

ಮಾನ್ಯ ಭಾರತ ಚುನಾವಣಾ ಆಯೋಗದ ಪತ್ರ ಸಂಖ್ಯೆ: 37/LC/2023-ERS (Vol-II) ದಿನಾಂಕ: 09.08.2023ರ ವೇಳಾಪಟ್ಟಿಯಂತೆ ಅರ್ಹತಾ ದಿನಾಂಕ: 01.11.2023ಕ್ಕೆ ಅನ್ವಯವಾಗುವಂತೆ, ಇಂದು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಅದರಂತೆ ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಪದವೀಧರರ ಕ್ಷೇತ್ರ ಚುನಾವಣೆಗೆ ಒಟ್ಟು 39,858 ಮತದಾರರು ನೋಂದಣಿ ಮಾಡಿಕೊಂಡಿದ್ದು, ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ 6343 ಮತದಾರರು ನೋಂದಣಿ ಮಾಡಿಕೊಂಡಿಕೊಂಡಿದ್ದಾರೆ.

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಕರಡು ಮತದಾರರ ಪಟ್ಟಿಯಲ್ಲ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ 23-11-2023 ರಿಂದ 09-12-2023 ರವೆರೆಗೆ ಸಂಬಂಧಪಟ್ಟ ಮದದಾನ ನೋಂದಣ ಅಧಿಕಾರಿಗಳ ಬಳಿ ಸಲ್ಲಿಸಬಹುದು. 25-12-2023ರಂದು ಬರುವಂತಹ ಹಕ್ಕು ಆಕ್ಷೇಪಣೆಗಳನ್ನು ಪರಿಶೀಲಿಸಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಇದಲ್ಲದೆ ಸಾಕಷ್ಟು ಪದವಿಧಾರರು ಮತ್ತು ಶಿಕ್ಷಕರನ್ನು ಸೇರ್ಪಡೆ ಮಾಡಿಕೊಳ್ಳಲು ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು. 30.12.2023 ರಂದು “ಅಂತಿಮ ಮತದಾರರ ಪಟ್ಟಿ” ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಅಂಚೆ ಮೂಲಕ ಮತದಾರರ ಗುರುತಿನ ಚೀಟಿ ಹಂಚಿಕೆ:

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ವಿತರಿಸಲಾಗುತ್ತಿದೆ. ಅದರಂತೆ ಬೆಂಗಳೂರು ಕೇಂದ್ರದಲ್ಲಿ 44,000, ಬೆಂಗಳೂರು ಉತ್ತರದಲ್ಲಿ 52,000, ಬೆಂಗಳೂರು ದಕ್ಷಿಣದಲ್ಲಿ 42,350 ಹಾಗೂ ಬೆಂಗಳೂರು ನಗರದಲ್ಲಿ 97,000 ಮತದಾರರ ಗುರುತಿನ ಚೀಟಿಗಳನ್ನು ವಿತರಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಮುಂದಿನ 15 ದಿನಗಳಲ್ಲಿ ಎಲ್ಲರಿಗೂ ಮತದಾರರ ಗುರುತಿನ ಚೀಟಿ ತಲುಪಲಿದೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಗೆ ಸಿದ್ದತೆ:

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ನಗರದಲ್ಲಿ ವಿಶೇಷ ಅಭಿಯಾನಗಳನ್ನು ಹಮ್ಮಿಕೊಂಡು ನಮೂನೆ-6/7/8 ನೀಡಿ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಮೃತ ಪಟ್ಟಿರುರುವರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಪ್ರಕ್ರಿಯೆ ಕೂಡಾ ನಡೆಯುತ್ತಿದ್ದು, ಜನವರಿ 5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.

ಯುವ ಮತದಾರರಲ್ಲಿ ಮನವಿ:

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ 18 ವರ್ಷ ತುಂಬಿದ ಯುವ ಮತದಾರರು ಸ್ವಯಂಪ್ರೇರಿತವಾಗಿ ಮುಂದೆ ಬಂದು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಬೇಕು. ಜೊತೆಗೆ ಇತರರನ್ನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲು ಪ್ರೇರಣೆ ನೀಡಬೇಕು. ಈ ಮೂಲಕ ಪ್ರಜಾಪ್ರಭುತ್ವದಲ್ಲಿ ಯುವ ಮತದಾರರ ಶಕ್ತಿಯನ್ನು ತೋರಿಸಲು ಯುವಕರಲ್ಲಿ ಮನವಿ ಮಾಡಿರುತ್ತಾರೆ.

ಈ ವೇಳೆ ಬೆಂಗಳೂರು ಕೇಂದ್ರ/ದಕ್ಷಿಣ/ಉತ್ತರ/ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಅಜಯ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related