ಇಂದು ಸ್ಪೀಕರ್ ಸ್ಥಾನಕ್ಕೆ ಚುನಾವಣೆ

ಇಂದು ಸ್ಪೀಕರ್ ಸ್ಥಾನಕ್ಕೆ ಚುನಾವಣೆ

ನವದೆಹಲಿ: 2024ನೇ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಸರ್ಕಾರ ಇದೀಗ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದ್ದು ಲೋಕಸಭೆ ಸ್ಪೀಕರ್ ಹುದ್ದೆಗೆ ಈ ಬಾರಿ ಪೈಪೋಟಿ ನಡೆಯುತ್ತಿದ್ದು ಐದು ದಶಕಗಳ ನಂತರ ಇದೇ ಮೊದಲ ಬಾರಿಗೆ ಲೋಕಸಭ ಸ್ಪೀಕರ್ ಸ್ಥಾನಕ್ಕೆ ಇಂದು (ಬುಧವಾರ ಜೂನ್ 26)‌ ರಂದು ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಸ್ಪೋಟಕ ಭವಿಷ್ಯ ನುಡಿದ ಕೊಡಿಶ್ರೀಗಳು..!

ಹೌದು, ಈಗಾಗಲೇ ಎನ್‌ಡಿಎ ಮೈತ್ರಿಕೂಟದ ಸರ್ಕಾರ ಕೇಂದ್ರದಲ್ಲಿದ್ದು ಈ ಬಾರಿಯೂ ಕೂಡ ಬಿಜೆಪಿ ನೇತೃತ್ವದ ಎನ್.ಡಿ.ಎ ಮೂರನೇ ಬಾರಿಗೆ ಸಂಸದ ಓಂ ಬಿರ್ಲಾ ಅವರನ್ನು ಸತತ ಎರಡನೇ ಅವಧಿಗೆ ಸ್ಪೀಕರ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದರೆ, ಎರಡೂ ಪಕ್ಷಗಳ ನಡುವಿನ ಮಾತುಕತೆ ವಿಫಲವಾದ ನಂತರ ಪ್ರತಿಪಕ್ಷಗಳು ಕೇರಳದಿಂದ ಎಂಟು ಬಾರಿ ಸಂಸದರಾಗಿರುವ ಕೋಡಿಕುನ್ನಿಲ್ ಸುರೇಶ್ ಅವರನ್ನು ಅಭ್ಯರ್ಥಿಯನ್ನಾಗಿ ನಾಮನಿರ್ದೇಶನ ಮಾಡುವ ಮೂಲಕ ಒಮ್ಮತಕ್ಕೆ ತಲುಪಲು ವಿಫಲವಾಗಿ ಚುನಾವಣೆ ನಡೆಯುತ್ತಿದೆ.

 

Related