ಹಣ ಬಲ ಮತ್ತು ಜನಬಲದ ನಡುವೆ ಚುನಾವಣೆ ನಡೆಯುತ್ತಿದೆ: ವಿಜಯೇಂದ್ರ

ಹಣ ಬಲ ಮತ್ತು ಜನಬಲದ ನಡುವೆ ಚುನಾವಣೆ ನಡೆಯುತ್ತಿದೆ: ವಿಜಯೇಂದ್ರ

ಮಂಡ್ಯ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯಕ್ಕೆ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸುಮಾರು 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.

ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷಗಳು ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಮಾತನಾಡಿ, ಹಣ ಬಲ ಮತ್ತು ಜನಬಲದ ನಡುವೆ ಚುನಾವಣೆ ನಡೆಯುತ್ತಿದೆ. ಜನ ಬಲದ ನಾಯಕ ಕುಮಾರಸ್ವಾಮಿ ಅವರನ್ನು ಅತ್ಯಧಿಕ ಬಹುಮತದಿಂದ ಚುನಾಯಿಸಿ ಲೋಕಸಭೆಗೆ ಕಳುಹಿಸಬೇಕು ಎಂದರು.

ಮಂಡ್ಯ ಜಿಲ್ಲೆಯಲ್ಲಿ ಸ್ಪರ್ಧಿಸಲು ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರೆತಂದವರು ನಾವು. ಜಿಲ್ಲೆಯ ಪ್ರಜ್ಞಾವಂತ ಮತದಾರರು ಮತ್ತು ತಾಯಂದಿರು ತಮ್ಮ ಮತವನ್ನು ಆಸೆ ಆಮಿಷಗಳಿಗೆ ಮಾರಿಕೊಳ್ಳದೆ ಕುಮಾರಸ್ವಾಮಿ ಬೆಂಬಲಿಸಬೇಕು ಎಂದು ಕೋರಿದರು. ಕಳೆದ ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಉಸ್ತುವಾರಿ ತೆಗೆದುಕೊಂಡು ನಮ್ಮ ಅಭ್ಯರ್ಥಿ ಕೆ.ಸಿ.ನಾರಾಯಣಗೌಡರನ್ನು ಗೆಲ್ಲಿಸಿಕೊಟ್ಟರೆ ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಮಾತು ಕೊಟ್ಟಿದ್ದೆ. ಅದರಂತೆ ಬಿಜೆಪಿ ಸರ್ಕಾರ ಕೆ.ಸಿ. ನಾರಾಯಣಗೌಡರನ್ನು ಸಚಿವರನ್ನಾಗಿ ಮಾಡಿ 1800 ಕೋಟಿಗೂ ಅಧಿಕ ಅನುದಾನ ನೀಡಿ ಕ್ಷೇತ್ರದ ಅಭಿವೃದ್ಧಿ ಮಾಡಿದೆ ಎಂದರು.

 

Related