ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ

ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ

ಬೆಂಗಳೂರು: ರಾಜ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಜನತೆಗೆ 200 ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಲಾಗುತ್ತಿದ್ದು ಇದರ ನಡುವೆ ಮತ್ತೆ ರಾಜ್ಯ ಸರ್ಕಾರ ಜನತೆಗೆ ಸಿಹಿ ಸುದ್ದಿಯನ್ನು ನೀಡಿದೆ.

ಹೌದು, ಇಂದಿನಿಂದ ಏಪ್ರಿಲ್ ಒಂದರಿಂದ ಸುಮಾರು ಪ್ರತಿ ಯೂನಿಟ್ ಗೆ 1.10 ರೂ ವಿದ್ಯುತ್ ಬೆಲೆಯಲ್ಲಿ ಕಡಿಮೆ ಮಾಡಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ. ಕೆಇಆರ್ ಸಿ ವಿದ್ಯುತ್​ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯುನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ.

ಇನ್ನು ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ.  2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದಿನಿಂದಲೇ(ಏಪ್ರಿಲ್​ 01) ಜಾರಿಗೆ ಬರಲಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ ನಿಗದಿ ಮಾಡಿದೆ.

 

Related